ಹುಬ್ಬಳ್ಳಿ:
ಕೇಂದ್ರ ಸರಕಾರ ದೇಶದ ಕಾರ್ಮಿಕರ ಹಿತ ಚಿಂತನೆಗೆ ಮೊದಲ ಆದ್ಯತೆ ನೀಡಿದ್ದು, ಕಾರ್ಮಿಕರ ಆರೋಗ್ಯ ದೃಷ್ಟಿಯಿಂದ ಅಗತ್ಯಕ್ಕೆ ತಕ್ಕಂತೆ ಇಎಸ್‌ಐ ಚಿಕಿತ್ಸಾಲಯಗಳನ್ನು ಆರಂಭಿಸಲಾಗುವುದು ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಹಾಯಕ ಸಚಿವ ಸಂತೋಷ ಕುಮಾರ ಗಂಗ್ವಾರ್ ಹೇಳಿದರು.
ನಗರದ ಇಎಸ್‌ಐ ಆಸ್ಪತ್ರೆಯನ್ನು 100 ಹಾಸಿಗೆ ಮೇಲ್ದರ್ಜೆಗೇರಿಸುವ ಕಟ್ಟಡಕ್ಕೆ ಗುರುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಆಸ್ಪತ್ರೆಯ ಹಾಸಿಗೆ ಸಾಮರ್ಥ್ಯವನ್ನಷ್ಟೇ ಅಲ್ಲದೆ ಹೊರರೋಗಿ, ಒಳರೋಗಿ, ತುರ್ತು ಚಿಕಿತ್ಸೆ, ಶಸ್ತ್ರಚಿಕಿತ್ಸಾ ವಿಭಾಗಗಳನ್ನು ಕೂಡ ಮೇಲ್ದಜೆಗೇರಿಸಲಾಗುತ್ತಿದೆ.
ಕಾರ್ಮಿಕರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಆಸ್ಪತ್ರೆಗಳ ಬಲವರ್ಧನೆಗೆ ಕೇಂದ್ರ ಸರಕಾರ ಮುಂದಾಗಿದೆ. ಹತ್ತು ಹಲವು ಯೋಜನೆಗಳನ್ನು ಕಾರ್ಮಿಕರಿಗೆ ನೀಡಲಾಗಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು ಎಂದರು….