Breaking News

ಕುಮಾರಸ್ವಾಮಿ ಸಿಎಂ ಆಗಿದ್ದಾರೆ ಕಷ್ಟ ದೂರವಾಗುತ್ತೆ..!

ನಗರದಲ್ಲಿ ಅನಿತಾ ಕುಮಾರಸ್ವಾಮಿ ಚುನಾವಣಾ ಪ್ರಚಾರ....

SHARE......LIKE......COMMENT......

ರಾಮನಗರ:

ನಗರದ ವಾರ್ಡ್​ಗಳಲ್ಲಿ ಅನಿತಾ ಕುಮಾರಸ್ವಾಮಿ ಹಾಗೂ ಡಿ.ಕೆ.ಸುರೇಶ್ ತೆರೆದ ಜೀಪಿನಲ್ಲಿ ಚುನಾವಣಾ ಪ್ರಚಾರ ನಡೆಸಿ ರೋಡ್ ಶೋ ನಡೆಸಿದರು.ನಗರ ವ್ಯಾಪ್ತಿಯಲ್ಲಿ ಇಂದು ಬಿರುಸಿನ ಪ್ರಚಾರ ನಡೆಸಿ ಕೈ-ದಳ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿಗೆ ಮತ ನೀಡುವಂತೆ ಮನವಿ ಮಾಡಿದರು. ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದ ಶಾಸಕ ಗೋಪಾಲಯ್ಯ ಅನಿತಾ ಕುಮಾರಸ್ವಾಮಿಗೆ ಸಾಥ್ ನೀಡಿದರು.ಈ ವೇಳೆ ಮಾತನಾಡಿದ ಅನಿತಾ ಕುಮಾರಸ್ವಾಮಿ, ರಾಮನಗರದಲ್ಲಿ ನನ್ನ ಪತಿ ಕುಮಾರಸ್ವಾಮಿಯವರಿಗೆ ಆಶೀರ್ವಾದ ಮಾಡಿದ್ದೀರಿ. ನನ್ನ ಮಾವ ದೇವೇಗೌಡರಿಗೂ ಆಶೀರ್ವದಿಸಿದ್ದೀರಿ. ಕುಮಾರಸ್ವಾಮಿಯವರು ಇಲ್ಲಿಂದಲೇ ಎರಡೂ ಬಾರಿ ಸಿಎಂ ಆಗಿದ್ದಾರೆ.

ಈ ಬಾರಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅಭ್ಯರ್ಥಿಯಾಗಿ ಕಣದಲ್ಲಿದ್ದೇನೆ. ನನಗೆ ಆಶೀರ್ವಾದ ಮಾಡಿ. ನಿಮ್ಮೆಲ್ಲರ ಕಷ್ಟಗಳಿಗೆ ಸ್ಪಂದಿಸುತ್ತೇನೆ ಎಂದು ಮನವಿ ಮಾಡಿದರು.ರಾಮನಗರದ ಪ್ರತಿ ವಾರ್ಡ್​ಗೂ ಸಹ ಕುಡಿಯುವ ನೀರಿನ ವ್ಯವಸ್ಥೆ, ಯುಜಿಡಿ, ರಸ್ತೆ ವ್ಯವಸ್ಥೆ ಮಾಡಲಾಗುವುದು. ಅಧಿಕಾರವಿದೆ, ಕುಮಾರಸ್ವಾಮಿ ಸಿಎಂ ಆಗಿದ್ದಾರೆ, ನಿಮ್ಮೆಲ್ಲರ ಕಷ್ಟ ದೂರವಾಗುತ್ತೆ ಎಂದು ಪ್ರಚಾರದ ವೇಳೆ ಭರವಸೆ ನೀಡಿದ ಅನಿತಾ ಕುಮಾರಸ್ವಾಮಿ, ಮುಂದಿನ ದಿನಗಳಲ್ಲಿ ನಿಮ್ಮೆಲ್ಲರ ಸಹಕಾರದಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಇದೇ ವೇಳೆ ಮಾತನಾಡಿದ ಡಿ.ಕೆ.ಸುರೇಶ್, ಕುಮಾರಸ್ವಾಮಿ ಕ್ಷೇತ್ರದಲ್ಲಿ ಪ್ರಚಾರ ಮಾಡದಿದ್ದರೂ ಗೆಲ್ಲಿಸುವ ನಿಮ್ಮನ್ನು ನೋಡಿ ಅಸೂಯೆ ಆಗುತ್ತದೆ. ಪ್ರತಿ ಬಾರಿ ಗಂಡಸರಿಗೆ ಮತ ನೀಡಿ ಕೆಲಸ ಮಾಡಿ ಅಂತ ಪದೇ ಪದೆ ಕೇಳಿಸಿಕೊಳ್ಳಬಾರದೆಂಬ ಕಾರಣಕ್ಕೆ ಈ ಬಾರಿ ಮಹಿಳೆಗೆ ಸೀಟು ಕೊಟ್ಟಿದ್ದೇವೆ. ನಿಮ್ಮೆಲ್ಲರ ಆಶೀರ್ವಾದ ಅವರಿಗೆ ನೀಡಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಬೆಂಬಲಿಸಿ ಎಂದರು……