Breaking News

ಅನಂತಕುಮಾರ್ ಅಂತಿಮ ದರ್ಶನಕ್ಕಾಗಿ ಸಚಿವರ ದಂಡು..

ಅಂತಿಮ ದರ್ಶನ ವೇಳೆ ಕಣ್ಣೀರಿಟ್ಟ ಸುಧಾಮೂರ್ತಿ....

SHARE......LIKE......COMMENT......

ಬೆಂಗಳೂರು:

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಎಚ್.ಎನ್.ಅನಂತಕುಮಾರ್ (59) ಅವರು ಸೋಮವಾರ ನಸುಕಿನ ವೇಳೆ ವಿಧಿವಶರಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ರಾಜ್ಯಪಾಲ ವಜೂಭಾಯ್ ವಾಲಾ ಸೇರಿದಂತೆ ಹಲವು ಗಣ್ಯರು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

ಇನ್ಫೋಸಿಸ್ ನ ಸುಧಾಮೂರ್ತಿ ಅವರು ಅನಂತ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ವೇಳೆ ಕಣ್ಣೀರಿಟ್ಟ ಪ್ರಸಂಗ ನಡೆಯಿತು.ಕೇಂದ್ರದ ಹಲವು ಸಚಿವರು ಬೆಂಗಳೂರಿಗೆ ಆಗಮಿಸಿ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ವರದಿ ತಿಳಿಸಿದೆ. ಇಂದು ಗೃಹ ಸಚಿವ ರಾಜನಾಥ್ ಸಿಂಗ್..ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಗಮಿಸಲಿದ್ದಾರೆ.

ಅನಂತ ಕುಮಾರ್ ಅವರ ನಿಧನಕ್ಕೆ ಸುತ್ತೂರು ಶ್ರೀಗಳು, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ…..