ಬೆಂಗಳೂರು:
ಕೇಂದ್ರ ಸಚಿವ ಅನಂತ್ ಕುಮಾರ್ ನಿಧನದ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಎಲ್ಲಾ ನಾಯಕರು ತಮ್ಮ ಪ್ರವಾಸ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ನಗರಕ್ಕೆ ಹಿಂದಿರುಗುತ್ತಿದ್ದಾರೆ.
ಕಲಬುರಗಿಗೆ ತೆರಳಿದ್ದ ಯಡಿಯೂರಪ್ಪ, ಮಾರ್ಗ ಮಧ್ಯದಲ್ಲಿ ಇದ್ದ ಡಿ.ವಿ. ಸದಾನಂದಗೌಡ ಸೇರಿದಂತೆ ಬಿಜೆಪಿ ರಾಜ್ಯ ನಾಯಕರೆಲ್ಲರೂ ಬೆಂಗಳೂರಿಗೆ ದೌಡಾಯಿಸುತ್ತಿದ್ದು ಬಿಜೆಪಿ ರಾಷ್ಟ್ರೀಯ ನಾಯಕರೂ ಆಗಮಿಸುವ ಸಾಧ್ಯತೆ ಇದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಚಿವ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ಭೇಟಿ ನೀಡಿ ಈ ಹಿಂದೆಯೇ ಆರೋಗ್ಯ ವಿಚಾರಿಸಿದ್ದು, ಇದೀಗ ಸಚಿವರು ನಿಧನಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಪರವಾಗಿ ಮತ್ತೊಮ್ಮೆ ಆಗಮಿಸಿ ಗೌರವ ಸಲ್ಲಿಕೆ ಮಾಡುವ ಸಾಧ್ಯತೆ ಇದೆ……