Breaking News

ಅರ್ಜುನ್ ಸರ್ಜಾ ಮಾನಹಾನಿ ಪ್ರಕರಣ..!

ನಟಿ ಶ್ರುತಿ ಹರಿಹರನ್ ಗೆ ಕೋರ್ಟ್ ನೋಟಿಸ್.....

SHARE......LIKE......COMMENT......

ಬೆಂಗಳೂರು:

ಬಹುಭಾಷಾ ನಟ ಅರ್ಜುನ್ ಸರ್ಜಾ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶ್ರುತಿ ಹರಿಹರನ್ ಅವರಿಗೆ ಕೋರ್ಟ್ ಶುಕ್ರವಾ ರ ನೋಟಿಸ್ ಜಾರಿ ಮಾಡಿದೆ.

ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಶ್ರುತಿ ವಿರುದ್ಧ ಅರ್ಜುನ್ ಸರ್ಜಾ ಅವರು 5 ಕೋಟಿ ರುಪಾಯಿ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ಪ್ರತಿಕ್ರಿಯೆ ಸಲ್ಲಿಸುವಂತೆ ನಟಿಗೆ ನೋಟಿಸ್ ನೀಡಿ, ವಿಚಾರಣೆಯನ್ನು ಅಕ್ಟೋಬರ್ 29ಕ್ಕೆ ಮುಂದೂಡಿದೆ.

ನಿನ್ನೆ ಶ್ರುತಿ ಹರಿಹನ್ ವಿರುದ್ಧ ಸಿವಿಲ್‌ ಕೋರ್ಟ್‌ನಲ್ಲಿ ಧ್ರುವ ಸರ್ಜಾ ಮೂಲಕ ಮಾನನಷ್ಟ ಮೊಕದ್ದಮೆ ದಾಖಲು ಮಾಡಿಸಿದ್ದ ಅರ್ಜುನ್ ಸರ್ಜಾ, 5 ಕೋಟಿ ರುಪಾಯಿ ಪರಿಹಾರ ನೀಡಲು ಮನವಿ ಸಲ್ಲಿಸಿದ್ದರು. ಅಲ್ಲದೆ ಈ ಪ್ರಕರಣ ಕುರಿತಂತೆ ಯಾವುದೇ ಬಹಿರಂಗ ಹೇಳಿಕೆ ನೀಡದಂತೆ ಶ್ರುತಿ ಹರಿಹರನ್ ಗೆ ನಿರ್ಬಂಧ ಹೇರಬೇಕೆಂದು ಅರ್ಜುನ್ ಸರ್ಜಾ ಅವರು ಕೋರಿದ್ದಾರೆ…….