Breaking News

ಇಂಟರ್‌ನ್ಯಾಷನಲ್ ಲೆವೆಲ್‌ನಲ್ಲಿ ಹೆಸರು ಮಾಡಿದ ರಾಕಿಂಗ್ ಸ್ಟಾರ್..!

ಯಶ್‌ಗೆ ಪ್ರಶಸ್ತಿ ನೀಡಿದ ಕರಣ್ ಜೋಹರ್....

SHARE......LIKE......COMMENT......

ಸಿನಿಮಾ:

ಕೆಜಿಎಫ್‌ ಚಿತ್ರದಿಂದ ನ್ಯಾಷನಲ್‌ ಲೆವಲ್‌ನಲ್ಲಿ ಹೆಸರು ಮಾಡಿದ ನಟ ರಾಕಿಂಗ್ ಸ್ಟಾರ್ ಯಶ್, ಇದೀಗ ಇಂಟರ್‌ನ್ಯಾಷನಲ್ ಲೆವಲ್‌ನಲ್ಲಿ ಹೆಸರು ಮಾಡಿದ್ದಾರೆ.ದಿ ಜಿ ಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ರಾಕಿ ಭಾಯ್ ಅಗ್ರ ಶ್ರೇಷ್ಠರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಮುಂಬೈನಲ್ಲಿ ನಡೆದ ದಿ ಜೀ ಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು ಭಾಗವಹಿಸಿದ್ದು, ಕಾರ್ಯಕ್ರಮದ ಮುಖ್ಯ ಅತಿಥಿ ಕರಣ್ ಜೋಹಾರ್ ಅವರಿಂದ ರಾಕಿಂಗ್ ಸ್ಚಾರ್ ಗೆ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.ಅಮೇರಿಕಾದ ನ್ಯೂಯಾರ್ಕ್ ಮೂಲದ ಅಂತರಾಷ್ಟ್ರೀಯ ಜಿ ಕ್ಯೂ ಪುರುಷರ ಮಾಸ ಪತ್ರಿಕೆ, ದಿ ಜಿ ಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ (The GQ 50 Most Influential Young Indians ) ಪಟ್ಟಿಯಲ್ಲಿ ರಾಕಿಂಗ್ ಸ್ಟಾರ್ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ.

ವಿಶೇಷ ಅಂದ್ರೆ, ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರೋ ಈ 50 ಯುವ ಭಾರತೀಯರು ಒಂದೇ ವೇದಿಕೆಯಲ್ಲಿ ಸೇರಿಸಿ ದಿ ಜೀ ಕ್ಯೂ ಕಾರ್ಯಕ್ರಮವನ್ನ ಮಾಡಿದೆ. ಈ ಕಾರ್ಯಕ್ರಮದ ದೊಡ್ಡ ವಿಶೇಷ ಅಂದ್ರೆ, 50 ಬೇರೆ ಬೇರೆ ಕ್ಷೇತ್ರಗಳಲ್ಲಿ ಪ್ರಭಾವ ಬೀರಿದಂತಹ ಯುವ ವ್ಯಕ್ತಿಗಳ ಸಾಲಲ್ಲಿ ಇಡೀ ಭಾರತೀಯ ಚಿತ್ರರಂಗದಿಂದ ಆಯ್ಕೆಯಾಗಿರೋದು ಏಕೈಕ ಸೂಪರ್ ಸ್ಟಾರ್ ಅದು ನಮ್ಮ ರಾಕಿಂಗ್ ಸ್ಟಾರ್ ಯಶ್……