ಉಡುಪಿ:
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸಾಮಾಜಿಕ ಸಂಸ್ಥೆಗಳ ನೆರವಿನಿಂದ ಉಡುಪಿಯಲ್ಲಿ ಭಿಕ್ಷಾಟನೆಯಲ್ಲಿ ನಿರತರಾದ ಮಕ್ಕಳ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.
ಮಣಿಪಾಲ, ಶ್ರೀಕೃಷ್ಣ ಮಠದ ಪರಿಸರ ಹಾಗೂ ಅಂಬಲಪಾಡಿ ದೇವಸ್ಥಾನದ ಮುಂಭಾಗ ಚಿಕ್ಕ ಮಕ್ಕಳನ್ನು ಬಳಸಿಕೊಂಡು ಭಿಕ್ಷಾಟನೆ ನಡೆಸುತ್ತಿದ್ದ ಮಹಿಳೆಯರಿಂದ 9 ಮಕ್ಕಳನ್ನು ವಶಕ್ಕೆ ಪಡೆದು ನಿಟ್ಟೂರಿನ ಮಕ್ಕಳ ಕಲ್ಯಾಣ ಸಮಿತಿಯ ನ್ಯಾಯಾಲಯದಲ್ಲಿ ಹಾಜರು ಪಡಿಸಲಾಯಿತು.
ಮಕ್ಕಳ ರಕ್ಷಣಾ ಕಾರ್ಯಾಚರಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸೇರಿದಂತೆ ಇತರ ಸಾಮಾಜಿಕ ಸಂಸ್ಥೆಗಳು ಭಾಗಿಯಾಗಿದ್ದರು…….