ಉಡುಪಿ:
ಆರೋಗ್ಯ ಸಚಿವ ಶ್ರೀರಾಮುಲು ಕಳೆದ ಕೆಲವು ದಿನಗಳಿಂದ ರಾಜ್ಯದ್ಯಂತ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲೇ ವಾಸ್ತವ್ಯ ಹೂಡುತ್ತಿದ್ದಾರೆ, ಕಳೆದ ರಾತ್ರಿ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಮಾಡಿದ್ರು. ಆಸ್ಪತ್ರೆಗೆ ಭೇಟಿ ನೀಡಿ ಖುದ್ದು ಆಸ್ಪತ್ರೆಯ ಸ್ಥಿತಿಗತಿಯನ್ನು ಪರಿಶೀಲಿಸಿದ ಶ್ರೀರಾಮುಲು, ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ, ರೋಗಿಗಳ ಆರೋಗ್ಯ ವಿಚಾರಿಸಿದ್ರು. ಬಳಿಕ ಎಮರ್ಜೆನ್ಸಿ ವಾರ್ಡ್ ಬಳಿಯ ವೈದ್ಯರ ಕೊಠಡಿಯಲ್ಲಿ ನಿದ್ರೆಗೆ ಜಾರಿದ್ರು. ಇದೇ ವೇಳೆ ಜಿಲ್ಲಾಸ್ಪತ್ರೆಯನ್ನ ಮೇಲ್ದರ್ಜೆಗೇರಿಸುವ ಭರವಸೆಯನ್ನ ಸಾರ್ವಜನಿಕರಿಗೆ ಕೊಟ್ರು….