Breaking News

ಎಂಟು ಶಾಸಕರಿಗೆ ಸ್ಥಾನ ನೀಡಲು ಅಂತಿಮ ತೀರ್ಮಾನ..!

ಇಬ್ಬರು ಹಾಲಿ ಸಚಿವರಿಗೆ ಕೊಕ್....

SHARE......LIKE......COMMENT......

ನವದೆಹಲಿ: 

ಇಬ್ಬರು ಹಾಲಿ ಸಚಿವರಿಗೆ ಕೊಕ್ ಕೊಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.ಸಚಿವ ಸಂಪುಟ ಪುನಾರಚನೆಯಲ್ಲಿ ಉತ್ತರ ಕರ್ನಾಟಕದ ರಮೇಶ್ ಜಾರಕಿಹೊಳಿ ಅವರಿಗೆ ಕೊಕ್ ಕೊಡಲು ನಿರ್ಧರಿಸಿದ್ದಾರೆನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾಂಗ್ರೆಸ್  ವರಿಷ್ಠ ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್, ಈಶ್ವರ್ ಖಂಡ್ರೆ, ಡಿಕೆ ಶಿವಕುಮಾರ್,ಜತೆ ಶನಿವಾರ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ.ರಮೇಶ್ ಜಾರಕಿಹೊಳಿ ಮತ್ತು ಆರ್.ಶಂಕರ್ ಅವರನ್ನು ಕೈಬಿಟ್ಟು ಸತೀಶ್ ಜಾರಕಿಹೊಳಿ, ಎಂಎಲ್ ಸಿ ಆರ್.ಬಿ.ತಿಮ್ಮಾಪುರ್, ಸಿಎಸ್ ಶಿವಳ್ಳಿ, ಎಂಟಿಬಿ ನಾಗರಾಜ್, ಪಿಟಿ ಪರಮೇಶ್ವರ್ ನಾಯ್ಕ್ ಸೇರಿದಂತೆ ಎಂಟು ಶಾಸಕರಿಗೆ ಸ್ಥಾನ ನೀಡಲು ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ……