ಬೆಂಗಳೂರು:
ಮಾಜಿ ಸಚಿವ ಎ.ಮಂಜು ಕಾಂಗ್ರೆಸ್ ತೊರೆದು ಬಿಜೆಪಿ ಸೇರುವು ಸುಳಿವು ನೀಡಿದ್ದು, ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಲೋಕಸಭಾ ಅಖಾಡಕ್ಕೆ ಇಳಿಯಲಿದ್ದಾರೆ ಎನ್ನುವ ಸಾಧ್ಯತೆ ಇದೆ.
ಬಿ.ಎಸ್.ವೈ ಅವರ ಜೊತೆ ಮಾತಾನಾಡಿರುವುದು ನಿಜ. ರಾಜಕೀಯ ನಿಂತ ನೀರಲ್ಲ ,ಧರ್ಮಸ್ಥಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಅವರನ್ನು ಭೇಟಿ ಮಾಡಿ ಮಾತನಾಡಿರುವುದು ಸತ್ಯ ಹಾಗೂ ಮೈಸೂರಿನಲ್ಲಿ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ. ಗುರುವಾರ ಅರಕಲಗೂಡಿನಲ್ಲಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರ ಸಭೆ ಕರೆದಿದ್ದೇನೆ. ಕಾರ್ಯಕರ್ತರು ತೆಗೆದುಕೊಳ್ಳುವ ತೀರ್ಮಾನಕ್ಕೆ ತಾವು ಬದ್ದನಾಗಿದ್ದು, ಒಂದೆರಡು ದಿನಗಳಲ್ಲಿ ತಮ್ಮ ನಿಲುವು ಸ್ಪಷ್ಟಪಡಿಸುವುದಾಗಿ ಹೇಳಿದ್ದಾರೆ. ಇದರಿಂದ ಬಿಜೆಪಿ ಸೇರ್ಪಡೆ ಸುಳಿವು ನೀಡಿದ್ದು ಲೋಕಸಭಾ ಅಖಾಡಕ್ಕೆ ಪ್ರಜ್ವಲ್ ರೇವಣ್ಣ ವಿರುದ್ಧ ಸ್ಪರ್ಧೆ ಸಾಧ್ಯತೆ ಹೆಚ್ಚಿದೆ ಎಂದು ತಿಳಿದುಬಂದಿದೆ……