ಕೋಲಾರ:
ಕೋಲಾರ ಜಿಲ್ಲೆಯ ಒಬ್ಬರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಸಂಸದ ಕೆಎಚ್ ಮುನಿಯಪ್ಪ ಆಗ್ರಹಿಸಿದ್ರು. ಕೋಲಾರ ನಗರದ ಎಸ್ ಎನ್ ಆರ್ ಜಿಲ್ಲಾಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ ಹಾಗೂ ನೂತನ ಕಟ್ಟಡ ಉದ್ಘಾಟನೆಗೆ ಆಗಮಿಸಿದ ವೇಳೆ ಸಂಸದ ಕೆ.ಎಚ್.ಮುನಿಯಪ್ಪ ಮಾತನಾಡಿ ಜಿಲ್ಲೆಯಲ್ಲಿ ಐದು ವಿಧಾನಸಭೆ ಸ್ಥಾನಗಳನ್ನು ಕಾಂಗ್ರೆಸ್ ಗೆ ಗೆಲ್ಲಿಸಿಕೊಟ್ಟಿದ್ದೇವೆ. ಜಿಲ್ಲೆಯಲ್ಲಿ ಯಾರಿಗಾದರೂ ಸಚಿವ ಸ್ಥಾನ ಕೊಟ್ಟರು ಸಂತೋಷ ಎಂದ್ರು. ಎರಡು ಬಾರಿ ಗೆದ್ದಿರುವ ಎಸ್.ಎನ್.ನಾರಾಯಣಸ್ವಾಮಿ, ಪಕ್ಷೇತರ ಶಾಸಕ ಎಚ್ ನಾಗೇಶ್, ರೂಪ ಶಶಿಧರ್, ನಂಜೇಗೌಡ ಇವರಲ್ಲಿ ಯಾರಿಗೆ ಸಚಿವ ಸ್ಥಾನ ನೀಡಿದರೂ ಸರಿ ಎಂದ್ರು. ಇನ್ನು ಇದೇ ವೇಳೆ ಜಿಲ್ಲಾಸ್ಪತ್ರೆಯ ವಾರ್ಡ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು…..