Breaking News

ಕನ್ನಡದಲ್ಲಿ ನಟಿಸುವ ಆಸೆ ಬಿಚ್ಚಿಟ್ಟ ಸಲ್ಮಾನ್ ಖಾನ್..!

ಮುಂಬರೋ ದಿನಗಳಲ್ಲಿ ಕನ್ನಡ ಸಿನಿಮಾಕ್ಕೆ ಆಗಮಿಸುವ ಸಲ್ಮಾನ್....

SHARE......LIKE......COMMENT......

ಬೆಂಗಳೂರು: 

ಬಾಲಿವುಡ್‍ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಅವಕಾಶ ಸಿಕ್ಕರೆ ಖಂಡಿತಾ ಕನ್ನಡ ಚಿತ್ರದಲ್ಲಿ ನಟಿಸೋದಾಗಿ ಹೇಳಿಕೊಂಡಿದ್ದಾರೆ. ಇದರ ಲೈವ್ ಸ್ಟ್ರೀಮಿಂಗ್ ಸಂದರ್ಭದಲ್ಲಿ ನಿರ್ದೇಶಕ ಅನೂಪ್ ಭಂಡಾರಿ ಈ ಬಗ್ಗೆ ಸಲ್ಮಾನ್ ಮುಂದೊಂದು ಆಫರ್ ಇಟ್ಟಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಲ್ಮಾನ್ ಖಂಡಿತಾ ನಟಿಸೋದಾಗಿ ಹೇಳಿಕೊಂಡಿದ್ದಾರೆ.

ಈಗಾಗಲೇ ಸುದೀಪ್ ಅವರೊಂದಿಗೆ ನಟಿಸಿಯಾಗಿದೆ. ಕನ್ನಡ ನಿರ್ದೇಶಕರೊಂದಿಗೂ ನಟಿಸೋ ಆಸೆಯಿದೆ. ಇಷ್ಟರಲ್ಲಿಯೇ ಬೆಂಗಳೂರಿಗೆ ಬಂದು ಅಭಿಮಾನಿಗಳನ್ನೆಲ್ಲ ಭೇಟಿಯಾಗೋದಾಗಿಯೂ ಸಲ್ಮಾನ್ ಹೇಳಿಕೊಂಡಿದ್ದಾರೆ. ಕಿಚ್ಚ ಸುದೀಪ್ ದಬಾಂಗ್ 3 ಚಿತ್ರದಲ್ಲಿ ಖಡಕ್ ವಿಲನ್ ಆಗಿ ನಟಿಸಿದ ಮೇಲಂತೂ ಸಲ್ಮಾನ್ ಖಾನ್‍ಗೆ ಕನ್ನಡದೊಂದಿಗಿನ ನಂಟು ಬಲವಾಗಿದೆ. ಅವರು ಮುಂಬರೋ ದಿನಗಳಲ್ಲಿ ಸುದೀಪ್ ಅವರೊಂದಿಗೇ ಕನ್ನಡಕ್ಕೆ ಆಗಮಿಸುವಂತಾದರೂ ಅಚ್ಚರಿಯೇನಿಲ್ಲ……