ಬೆಳಗಾವಿ:
ಕನ್ನಡ ರಾಜ್ಯೋತ್ಸವದ ದಿನ ಎಂಇಎಸ್ ಕರಾಳ ದಿನಾಚರಣೆಗೆ ಕರೆಕೊಟ್ಟಿರೋ ಹಿನ್ನೆಲೆಯಲ್ಲಿ ಕುಂದಾನಗರಿ ಭಾರೀ ಬಂದೋಬಸ್ತ್ ಮಾಡಲಾಗಿದೆ. ನವೆಂಬರ್ 1ರಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆಗೆ ಕ್ರಮ ಕೈಗೊಳ್ಳಲಾಗಿದೆ.
ರಾಜ್ಯದ ಏಳು ವಲಯಗಳಿಂದ 800ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಿ ಕಾನೂನು ಸುವ್ಯವಸ್ಥೆ ಎಡಿಜಿಪಿ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ, ಎಸ್ಪಿಯ ಮೇಲುಸ್ತುವಾರಿಯಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗಿದೆ. 6 ಡಿಎಸ್ಪಿಗಳು, 20 ಸಬ್ಇನ್ಸ್ಪೆಕ್ಟರ್ಗಳು, 52 ಪಿಎಸ್ಐಗಳು, 70 ಎಎಸ್ಐಗಳು, 700 ಪೇದೆಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ನಾಳೆಯಿಂದಲೇ ಪೊಲೀಸರು ಬೆಳಗಾವಿ ನಗರಕ್ಕೆ ಆಗಮಿಸಲಿದ್ದಾರೆ…….