Breaking News

ಕರಾವಳಿಯಲ್ಲಿ ಮತ್ತೆ ಭಾರೀ ಸೈಕ್ಲೋನ್​ ಭೀತಿ..!

48 ಗಂಟೆಗಳಲ್ಲಿ ಬಿರುಗಾಳಿಯಿಂದ ಕೂಡಿದ ಭಾರೀ ಮಳೆ....

SHARE......LIKE......COMMENT......

ಕರಾವಳಿ:

ಕಳೆದ ವರ್ಷ ಚಂಡಮಾರುತದಿಂದ ತತ್ತರಿಸಿದ್ದ ಕರಾವಳಿಯಲ್ಲಿ ಮತ್ತೆ ಭಾರೀ ಸೈಕ್ಲೋನ್​ ಭೀತಿ ಎದುರಾಗಿದೆ. ಮುಂದಿನ 48 ಗಂಟೆಗಳಲ್ಲಿ ಬಿರುಗಾಳಿಯಿಂದ ಕೂಡಿದ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಿಂದೂ ಮಹಾಸಾಗರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರ ಕರಾವಳಿ ಪ್ರದೇಶಗಳಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಭಾರೀ ಮಳೆ ಸುರಿಯಲಿದೆ. ಪನಿ ಹೆಸರಿನ ಈ ಚಂಡಮಾರುತ ಗಂಟೆಗೆ ಸುಮಾರು 90ರಿಂದ 100 ಕಿ.ಮೀ. ವೇಗದಲ್ಲಿ ಅಪ್ಪಳಿಸಲಿದ್ದು, ಗರಿಷ್ಠ 115 ಕಿ.ಮಿ.ವರೆಗೂ ತಲುಪುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲೂ ಸೈಕ್ಲೋನ್​ ಎಫೆಕ್ಟ್​ ಇರಲಿದ್ದು, ಅಲ್ಲಲ್ಲಿ ಮಳೆಯಾಗೋ ಸಾಧ್ಯತೆಯಿದೆ. ಮತ್ತೊಂದೆಡೆ ರಾಜ್ಯದ ಬೆಳಗಾವಿ, ವಿಜಯಪುರ, ಬೀದರ್​​​​​ ಸೇರಿದಂತೆ 12 ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸೋ ಸಾಧ್ಯತೆ ಇದೆ……