ನವದೆಹಲಿ:
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಾಂಗ್ರೆಸ್ ಗೆ ಮತ ಹಾಕುವುದೆಂದರೆ ಅದು ಬಿಜೆಪಿಯನ್ನು ಗೆಲ್ಲಿಸಿದಂತೆ ಎಂದು ಹೇಳಿದ್ದಾರೆ.ದೆಹಲಿ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷೆ ಶೀಲಾ ದೀಕ್ಷಿತ್ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಸಾಧ್ಯತೆಯನ್ನು ತಳ್ಳಿ ಹಾಕಿರುವ ಬೆನ್ನಲ್ಲೇ ಇದೀಗ ಕೇಜ್ರಿವಾಲ್ ಈ ಹೇಳಿಕೆ ನೀಡಿರುವುದು ಅಚ್ಚರಿ ಎನ್ನಿಸುತ್ತಿದೆ…
AAP ಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್ ಅವರು ಕಾಂಗ್ರೆಸ್ ಭ್ರಷ್ಟಾಚಾರದ ರೈಲನ್ನು ಆರಂಭಿಸಿತ್ತು, ಈಗ ಮೋದಿ ಅದನ್ನ ಚಾಲನೆ ಮಾಡುತ್ತಿದ್ದಾರೆ. ಮುಖಗಳು ಬದಲಾಗಿವೆ ಆದರೆ ಭ್ರಷ್ಟಾಚಾರ ಹಾಗೆಯೇ ಉಳಿದಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ನಾವೆಲ್ಲರೂ ಒಟ್ಟಾಗಿ ಭ್ರಷ್ಟ ಕಾಂಗ್ರೆಸ್ ನ್ನು ಅಧಿಕಾರದಿಂದ ಕಿತ್ತೊಗೆದಿದ್ದೇವು ಎಂದು ಹೇಳಿದ್ದಾರೆ…