Breaking News

ಕಾಂಗ್ರೆಸ್‌ನ ಹಿರಿಯ ನಾಯಕ ಕಪಿಲ್ ಸಿಬಲ್ ಟ್ವೀಟ್‌..!

ಫೋಟೋಗೆ ಪೋಸ್ ಕಡಿಮೆ ಮಾಡಿ, ಕೆಲಸ ಮಾಡಿ ಎಂದು ಮೋದಿ ವಿರುದ್ಧ ವಾಗ್ದಾಳಿ....

SHARE......LIKE......COMMENT......

ನವದೆಹಲಿ:  

ಭಾರತದ ಆರ್ಥಿಕತೆ ಬಗ್ಗೆ ಭಾರತ ಮೂಲದ ನೊಬೆಲ್ ಪುರಸ್ಕೃತ ಅಭಿಜಿತ್‌ ಬ್ಯಾನರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ. ಬಹಳ ವರ್ಷಗಳ ಬಳಿಕ ಈ ರೀತಿಯಾಗುತ್ತಿದೆ. ಭಾರತದ ಆರ್ಥಿಕ ಸ್ಥಿತಿ ಶೋಚನೀಯವಾಗಿದೆ ಎಂದು ತಿಳಿಸಿದ್ದಾರೆ. ಇದು ಎಚ್ಚರಿಕೆಯ ಸಂಕೇತ. ಆರ್ಥಿಕ ಹಿಂಜರಿತದ ಬಗ್ಗೆ ಸರ್ಕಾರಕ್ಕೆ ಅರಿವಿದೆಯ ಎಂದು ಹೇಳಿದ್ದಾರೆ. ಆದರೆ, ಈ ಸಮಸ್ಯೆಯ ನಿವಾರಣೆಗೆ ಏನು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಲು ಅವರು ನಿರಾಕರಿಸಿದ್ದಾರೆ. ಅಭಿಜಿತ್‌ ಬ್ಯಾನರ್ಜಿ ಆರ್ಥಿಕತೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಫೋಟೊಗೆ ಪೋಸ್ ಕೊಡೋದು ಕಡಿಮೆ ಮಾಡಿ, ಕೆಲಸ ಮಾಡಿ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಕಪಿಲ್ ಸಿಬಲ್ ಟ್ವೀಟ್‌ ಮಾಡಿದ್ದಾರೆ……