ತುಮಕೂರು:
ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು , ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿರಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಶ್ರೀರಾಮಚಂದ್ರ (45), ಧನಂಜಯ (45) ಇಬ್ಬರು ಸ್ಥಳದಲ್ಲೇ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಚಿತ್ರದುರ್ಗ ಕಡೆ ತೆರಳುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ತುಮಕೂರು ಕಡೆಯಿಂದ ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ನಿತೀಶ್, ಸಂಜಯ್, ಅಮರೇಶ್, ಸುರೇಶ್, ಅಶ್ವತ್ ಅವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಾ ನಗರ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ…..