ಬೆಂಗಳೂರು:
ನಟ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಚಿತ್ರಕ್ಕೆ ಮತ್ತೆ ಅಡ್ಡಿ ಎದುರಾಗಿದ್ದು, ಇದೀಗ ಚಿತ್ರದ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ ಎನ್ನಲಾಗಿದೆ. ಮಾಧ್ಯಮವೊಂದು ವರದಿ ಮಾಡಿರುವಂತೆ ಈ ಸಿನಿಮಾದ ಕಥೆ ನಟೋರಿಯಸ್ ರೌಡಿ ತಂಗಂ ಕಥೆ ಹೋಲುತ್ತಿದೆ ಎಂದು ದೂರು ದಾಖಲಾಗಿದೆ. ಚಿತ್ರದಲ್ಲಿ ಬರುವ ಯಶ್ ಪಾತ್ರ ತಮ್ಮ ಮಗನ ನಿಜ ಜೀವನದ ಪಾತ್ರ ಹೋಲುತ್ತದೆ ಎಂದು ತಂಗಂ ತಾಯಿ ಪೌಳಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ. ಕುಟುಂಬದ ಅನುಮತಿ ಇಲ್ಲದೇ ಕೆಜಿಎಫ್ ಚಾಪ್ಟರ್ 1ರಲ್ಲಿ ನನ್ನ ಮಗನ ನಿಜ ಜೀವನದ ಪಾತ್ರ ಬಳಸಿಕೊಳ್ಳಲಾಗಿದೆ ಎಂಬುದು ತಂಗಂ ತಾಯಿ ಪೌಳಿ ಆರೋಪವಾಗಿದ್ದ, ಇದೇ ಕಾರಣಕ್ಕೆ ‘ಕೆಜಿಎಫ್ ಚಾಪ್ಟರ್ 2’ಗೆ ತಡೆ ನೀಡಬೇಕೆಂದು ಮನವಿ ಮಾಡಿದ್ದಾರೆ. ದೂರಿನ ಆಧಾರದ ಮೇಲೆ ಅಕ್ಟೋಬರ್ 9ಕ್ಕೆ ವಿಚಾರಣೆಗೆ ಹಾಜರಾಗುವಂತೆ ಚಿತ್ರ ತಂಡಕ್ಕೆ ಕೋರ್ಟ್ ಸಮನ್ಸ್ ನೀಡಿದೆ. ಈ ದೂರಿನಿಂದ ಚಿತ್ರಕ್ಕೆ ದೊಡ್ಡ ಕಂಟಕ ಉಂಟಾಗುವ ಸಾಧ್ಯತೆ ಇದೆ…….