ಬೆಂಗಳೂರು:
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷೆಯ ‘ಕೆಜಿಎಫ್-2’ ಚಿತ್ರತಂಡಕ್ಕೆ ಚಿತ್ರೀಕರಣ ನಡೆಸದಂತೆ ಕೋಲಾರ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿತ್ತು. ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಚಿತ್ರೀಕರಣ ವೇಳೆ ಪರಿಸರಕ್ಕೆ ಯಾವುದೇ ಹಾನಿ ಮಾಡಿಲ್ಲ. ಇನ್ನೂ 25 ದಿನಗಳಲ್ಲಿ ಚಿತ್ರೀಕರಣ ಮುಗಿಸುತ್ತೇವೆ ಎಂದು ಮನವಿ ಮಾಡಿಕೊಂಡಿದ್ದರು. ನಿರ್ಮಾಪಕರ ಮನವಿ ಪುರಸ್ಕರಿಸಿದ ಹೈಕೋರ್ಟ್ ಚಿತ್ರೀಕರಣಕ್ಕೆ ಅನುಮತಿ ನೀಡಿದೆ. ಇದೀಗ ಚಿತ್ರತಂಡಕ್ಕೆ ಬಿಗ್ ರಿಲೀಫ್ ಸಿಕ್ಕಿದೆ.
ಕೋಲಾರ ಜಿಲ್ಲೆಯ ಕೆಜಿಎಫ್‍ನ ಕೆನಡೀಸ್ ಸೈನೈಡ್ ಗುಡ್ಡದ ಮೇಲೆ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್-2 ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ದುಬಾರಿಯ ಸೆಟ್ ಹಾಕಲಾಗಿತ್ತು. ಆದರೆ ಶ್ರೀನಿವಾಸ್ ಎಂಬವರು ಪರಿಸರ ಹಾನಿ ಹಾಗೂ ಚಿತ್ರೀಕರಣದಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂದು ಕೆಜಿಎಫ್ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿದಾರರ ವಾದ ಪುರಸ್ಕರಿಸಿ ಕೋರ್ಟ್ ಕೆಜಿಎಫ್ ನಿರ್ಮಾಪಕರಿಗೆ ತಾತ್ಕಾಲಿಕವಾಗಿ ಶೂಟಿಂಗ್ ನಿಲ್ಲಿಸುವಂತೆ ಸೂಚನೆ ನೀಡಿತ್ತು. ಇದೀಗ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡುವ ಮೂಲಕ ಚಿತ್ರೀಕರಣಕ್ಕೆ ಅವಕಾಶ ನೀಡಿದೆ. …..