ಬೆಂಗಳೂರು:
ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಹಾಲಿ ಸಂಸದ ಡಿ.ಕೆ.ಸುರೇಶ್ ಇಂದು ಉಮೇದುವಾರಿಕೆ ಸಲ್ಲಿಸಿದ್ದರು ,ನಾಮಪತ್ರಕ್ಕೂ ಮುನ್ನ ಕೆಂಕೆರೆಯಲ್ಲಿರೋ ಕೆಂಕೇರಮ್ಮ ದೇಗುಲಕ್ಕೆ ತೆರಳಿ ಸುರೇಶ್ ಬಿ ಫಾರಂ ಇಟ್ಟು ಪೂಜೆ ಸಲ್ಲಿಸಿದರು. ನಂತರ ರಾಮನಗರದ ಜೂನಿಯರ್ ಕಾಲೇಜು ಮೈದಾನದಿಂದ ಮೆರವಣಿಗೆ ಮೂಲಕ ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಕೆ ಮಾಡಿದ್ದರು. ಡಿ.ಕೆ.ಸುರೇಶ್ಗೆ, ಸಿಎಂ ಕುಮಾರಸ್ವಾಮಿ ಸಚಿವ ಡಿ.ಕೆ.ಶಿವಕುಮಾರ್, ಶಾಸಕಿ ಅನಿತಾ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ನಾಮಪತ್ರ ಸಲ್ಲಿಕೆ ವೇಳೆ ಭಾಗಿಯಾಗಿದ್ದರು ಜೊತೆಗೆ ಪಕ್ಷದ ಕಾರ್ಯಕರ್ತರು, ಮುಖಂಡರು ಮತ್ತು ಸಾವಿರಾರು ಅಭಿಮಾನಿಗಳು ಸಾಥ್ ಕೊಟ್ಟಿದ್ದಾರೆ……