Breaking News

ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದಾರಾ ಸಚಿವ ಅನಂತಕುಮಾರ್?

ಗಣ್ಯರ ದಂಡೇ ನಗರದ ಶಂಕರ್ ಕ್ಯಾನ್ಸರ್ ಆಸ್ಪತ್ರೆಗೆ ....

SHARE......LIKE......COMMENT......

ಬೆಂಗಳೂರು:

ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿರುವ ಕೇಂದ್ರ ಸಚಿವ ಅನಂತ ಕುಮಾರ್ ಭೇಟಿಗೆ ಗಣ್ಯರ ದಂಡೇ ನಗರದ ಶಂಕರ್ ಕ್ಯಾನ್ಸರ್ ಆಸ್ಪತ್ರೆಗೆ ಹರಿದುಬರುತ್ತಿದೆ.

ಮೊನ್ನೆಯಷ್ಟೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಕೆಲ ಕಾಲ ಅನಂತ ಕುಮಾರ್ ಜತೆ ಮಾತುಕತೆ ನಡೆಸಿದ್ದರು. ನಿನ್ನೆ ರಾಜ್ಯ ಸರ್ಕಾರದ ಪರವಾಗಿ ಸಚಿವ ಆರ್ ವಿ ದೇಶಪಾಂಡೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಮೂಲಗಳ ಪ್ರಕಾರ ಅನಂತಕುಮಾರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ವೈದ್ಯ ಡಾ. ಬಿಎಸ್ ಶ್ರೀನಾಥ್ ಸಚಿವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ ಸಚಿವರ ಆರೋಗ್ಯ ಸ್ಥಿತಿಯ ಬಗ್ಗೆ ನಿಖರವಾದ ಮಾಹಿತಿಯನ್ನು ಯಾರೂ ಇದುವರೆಗೆ ಬಿಟ್ಟುಕೊಟ್ಟಿಲ್ಲ…….