ಬೆಂಗಳೂರು:
ಮಹಿಳೆ ಮೇಲೆ ಯುವಕನ್ನೊಬ್ಬ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಬಸವೇಶ್ವರನಗರದಲ್ಲಿ ನಡೆದಿದೆ. ಕಳೆದ ಶುಕ್ರವಾರ ಬಸವೇಶ್ವರನಗರದ ಹೆಚ್ಪಿ ಪೆಟ್ರೋಲ್ ಬಂಕ್ನಲ್ಲಿ ಶೋಭಾ ಅನ್ನೋರು ಪೆಟ್ರೋಲ್ ಹಾಕಿಸಿಕೊಳ್ಳಲು ಬಂದಿದ್ರು. ಇದೇ ಟೈಮಲ್ಲಿ ಹಿಂದಿನಿಂದ ಬಂದ ಯುವಕನೊಬ್ಬ ಮಹಿಳೆಯ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುತ್ತಾನೆ. ಇದನ್ನ ಪ್ರಶ್ನಿಸಿದ ಶೋಭಾಗೆ ಆ ಯುವಕ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದಾನೆ. ಅಲ್ದೇ ಮಹಿಳೆ ಮೇಲೆಯೇ ಹಲ್ಲೆಗೆ ಮುಂದಾಗಿ, ವಾಹನಕ್ಕೆ ಡ್ಯಾಮೇಜ್ ಮಾಡಿದ್ದಾನೆ. ಹಲ್ಲೆ ನಂತ್ರ ಯುವಕ ಪರಾರಿಯಾಗಿದ್ದು, ಘಟನೆಯ ದೃಶ್ಯ ಪೆಟ್ರೋಲ್ ಬಂಕ್ನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಬಸವೇಶ್ವರನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…..