ಬೆಂಗಳೂರು:
ರಾಜ್ಯದಲ್ಲಿ ಎಚ್1ಎನ್1 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಪ್ರತಿ ಎಚ್1ಎನ್1 ಪರೀಕ್ಷೆಗೆ 2500 ರುಪಾಯಿಗಿಂತ ಹೆಚ್ಚು ದರ ವಿಧಿಸುವಂತಿಲ್ಲ ಎಂದು ಆರೋಗ್ಯ ಇಲಾಖೆ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಿದೆ.
ಈ ವರ್ಷ ರಾಜ್ಯದಲ್ಲಿ ಒಟ್ಟು 441 ಎಚ್1ಎನ್1 ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ ಬೆಂಗಳೂರಿನಲ್ಲಿಯೇ 99 ಪ್ರಕರಣಗಳು ವರದಿಯಾಗಿದ್ದವು. ಇದನ್ನೆ ಬಂಡವಾಳ ಮಾಡಿಕೊಂಡ ಖಾಸಗಿ ಆಸ್ಪತ್ರೆಗಳು ಎಚ್1ಎನ್1 ಪೀಡಿತರ ಗಂಟಲಿನ ಸ್ವಾಬ್ ಪರೀಕ್ಷೆಗೆ 4000 ರು.ಗಿಂತ ಅಧಿಕ ದರ ವಸೂಲಿ ಮಾಡುತ್ತಿದ್ದವು.
ಖಾಸಗಿ ಆಸ್ಪತ್ರೆಗಳು ಎಚ್1ಎನ್1 ಪರೀಕ್ಷೆಗೆ ಹೆಚ್ಚು ದರ ವಿಧಿಸುತ್ತಿರುವ ಬಗ್ಗೆ ಆರೋಗ್ಯ ಇಲಾಖೆಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ದರ ನಿಗದಪಡಿಸಿದೆ. ಜತೆಗೆ ಎಚ್1ಎನ್1 ಸಂಬಂಧಿತ ಎಲ್ಲ ಪರೀಕ್ಷೆಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿದೆ ಆಸ್ಪತ್ರೆಗಳಲ್ಲಿ ಎಚ್1ಎನ್1 ಪೀಡಿತರನ್ನು ನೋಡಿಕೊಳ್ಳುತ್ತಿರುವ ವೈದ್ಯರು ಮತ್ತು ದಾದಿಯರು ಕೂಡ ಲಸಿಕೆ ತೆಗೆದುಕೊಳ್ಳುವಂತೆ ಸೂಚಿಸಿದೆ…..