ಅಯೋಧ್ಯೆ:
ಉತ್ತರ ಪ್ರದೇಶದಲ್ಲಿ ಬಿಜೆಪಿ ಶಕ್ತಿ ಕುಗ್ಗಿಸಲು ಪಣ ತೊಟ್ಟಿರೋ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ರಣತಂತ್ರದ ಮೇಲೆ ರಣತಂತ್ರ ರೂಪಿಸುತ್ತಿದ್ದಾರೆ. ಕಳೆದ ವಾರ ಗಂಗಾಯಾತ್ರೆ ಮಾಡಿದ್ದ ಪ್ರಿಯಾಂಕ ಗಾಂಧಿ, ಇದೀಗ ಅಯೋಧ್ಯೆ ಮೇಲೆ ಕಣ್ಣಿಟ್ಟಿದ್ದಾರೆ. ಮಾರ್ಚ್ 27ರಂದು ಅಯೋಧ್ಯೆಯಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ. ಈ ಮೂಲಕ ಬಿಜೆಪಿಯ ಹಿಂದುತ್ವದ ಅಜೆಂಡಾಗೆ ಟಾಂಗ್ ಕೊಡೋ ಪ್ರಯತ್ನವನ್ನು ಪ್ರಿಯಾಂಕ ಗಾಂಧಿ ಮಾಡ್ತಿದ್ದಾರೆ. ಪೂರ್ವ ಉತ್ತರ ಪ್ರದೇಶದಲ್ಲಿ ಬಿಜೆಪಿ ಹಿಡಿತ ತಪ್ಪಿಸಲು ಕಾಂಗ್ರೆಸ್ ನಾನಾ ರಣತಂತ್ರಗಳನ್ನು ಹೆಣೆಯುತ್ತಿದೆ……