Breaking News

ಗ್ರಾಮೀಣ ಅಭಿವೃದ್ಧಿಗೆ ಆದ್ಯತೆ..!

ಜೋಡಿ ರಸ್ತೆ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ....

SHARE......LIKE......COMMENT......

ಶಿಡ್ಲಘಟ್ಟ:

ರಾಜ್ಯದಲ್ಲಿರುವ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ. ನಾಗರಿಕರಿಗೆ ಅನುಕೂಲ ಕಲ್ಪಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಿಂದ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿವರೆಗೆ 50 ಕೋಟಿ ರೂ.ಗಳ ವೆಚ್ಚದಲ್ಲಿ ಜೋಡಿ ರಸ್ತೆಯನ್ನು ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ವಿ.ಮುನಿಯಪ್ಪ ಹೇಳಿದರು.

ತಾಲೂಕಿನ ಕುಂದಲಗುರ್ಕಿ ಗ್ರಾಮದಲ್ಲಿ ನೂತನ ಸಾರಿಗೆ ಬಸ್‌ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ವಿಶೇಷ ಆದ್ಯತೆ ನೀಡಲಾಗಿದೆ. ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿ ದೀಪ, ಸಾರಿಗೆ ವ್ಯವಸ್ಥೆಯನ್ನು ಉತ್ತಮಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ಗ್ರಾಮೀಣ ಪ್ರದೇಶಗಳ ರಸ್ತೆಗಳನ್ನು ಅಭಿವೃದ್ಧಿಗೊಳಿಸಲು ಆದ್ಯತೆ ನೀಡಲಾಗಿದೆ. ಈಗಾಗಲೇ ಕೈವಾರದಿಂದ ವೈ.ಹುಣಸೇನಹಳ್ಳಿ- ಕುಂದಲಗುರ್ಕಿ ಮಾರ್ಗವಾಗಿ ಏನಿಗದಲೆವರೆಗೆ ರಸ್ತೆಯನ್ನು ಅಭಿವೃದ್ಧಿಗೊಳಿಸಲಾಗಿದೆ. ಹಾಗೆಯೇ ವಿಜಯಪುರದಿಂದ ದಿಬ್ಬೂರಹಳ್ಳಿವರೆಗೆ ಜೋಡಿ ರಸ್ತೆಯನ್ನು ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಕುಂದಲಗುರ್ಕಿ ಗ್ರಾಪಂ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಕುಂದಲಗುರ್ಕಿ ಗ್ರಾಮದಲ್ಲಿ ಪಿಯು ಕಾಲೇಜು ಮಂಜೂರು ಮಾಡಿಸಲು ಈಗಾಗಲೇ ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗಿದೆ.ರಾಜ್ಯದಲ್ಲಿ ಉಪಚುನಾವಣೆಗಳು ಮುಗಿದ ಬಳಿಕ ಕಾಲೇಜು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಕುಂದಲಗುರ್ಕಿ ಗ್ರಾಮದಲ್ಲಿ ಪಶು ಆಸ್ಪತ್ರೆಯನ್ನು ಸ್ಥಾಪಿಸಲು ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಭರವಸೆ ನೀಡಿದರು…..