Breaking News

ಗಾಂಜಾ ಮಾರುತ್ತಿದ್ದ ಮಹಿಳೆ ಅರೆಸ್ಟ್..!

10 ಸಾವಿರ ರೂ. ಮೌಲ್ಯದ ಗಾಂಜಾ ಜಪ್ತಿ.....

ಗಾಂಜಾ ಸೇವನೆ ಆರೋಗ್ಯಕ್ಕೆ ಹಾನಿಕಾರಕ
SHARE......LIKE......COMMENT......

ಚಿಕ್ಕಬಳ್ಳಾಪುರ:

ಜಿಲ್ಲೆಯ ಚಿಂತಾಮಣಿಯಲ್ಲಿ ಅಕ್ರಮವಾಗಿ ಗಾಂಜಾ ಮಾರುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಮೆಕಬುಲ್ ವೆಂಕಟಲಕ್ಷ್ಮಮ್ಮ (60) ಎಂದು ಗುರುತಿಸಲಾಗಿದೆ. ಚಿಂತಾಮಣಿ ನಗರದ ಟಿಪ್ಪು ನಗರದಲ್ಲಿ ಮಹಿಳೆ ಗಾಂಜಾ ಮಾರುತ್ತಿರುವ ಬಗ್ಗೆ ಮಾಹಿತಿ ಅರಿತ ಪೊಲೀಸರು, ಕಾರ್ಯಾಚರಣೆ ನಡೆಸಿ ಮಹಿಳೆಯಿಂದ 10 ಸಾವಿರ ರೂ. ಮೌಲ್ಯದ ಅಕ್ರಮ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ……