ದಾವಣಗೆರೆ:
ಕಬ್ಬಿನ ಗದ್ದೆಯ ಒಳಗೆ ಇಸ್ಪೀಟ್ ಆಡುತ್ತಿದ್ದ 11 ಮಂದಿಯನ್ನು ದಾವಣಗೆರೆ ಡಿಸಿಬಿ ಪೊಲೀಸರು ಬಂಧಿಸಿರುವ ಘಟನೆ ದಾವಣಗೆರೆಯ ಶಿರಮಗೊಂಡನಹಳ್ಳಿಯಲ್ಲಿ ನಡೆದಿದೆ.
ಅಣ್ಣೇಶಿ(34), ನಾಗರಾಜ (40), ಪರುಸಪ್ಪ (37), ಮಾರುತಿ (24) ಸೇರಿದಂತೆ ಒಟ್ಟು 11 ಮಂದಿ ಬಂಧಿತರು ಎಂದು ತಿಳಿದು ಬಂದಿದ್ದು, ಬಂಧಿತರಿಂದ 12,850 ರೂ. ನಗದು, 9 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ಅಧೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ದಾವಣಗೆರೆ ಡಿಸಿಬಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ದೇವರಾಜ ಟಿ.ವಿ. ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ಕುರಿತು ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ……