ನಾಗಮಂಗಲ:
ಜೆಡಿಎಸ್-ಕಾಂಗ್ರೆಸ್ನವರ ಬ್ಲಡ್ ಗ್ರೂಪ್ ಬೇರೆ ಬೇರೆ. ಹಾಗಾಗಿ ಇವರಿಗೆ ಹೊಂದಾಣಿಕೆ ಆಗಲು ಸಾಧ್ಯವಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ವ್ಯಂಗ್ಯವಾಡಿದರು.
ಪಟ್ಟಣದಲ್ಲಿ ಸೋಮವಾರ ಪಕ್ಷದ ಅಭ್ಯರ್ಥಿ ಪರ ಕಾಲ್ನಡಿಗೆ ಮೂಲಕ ಮತಯಾಚನೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ಡೆಡ್ ಹಾರ್ಸ್ ಎಂದು ಕರೆದ ಪಕ್ಷದ ಎಲ್.ಆರ್.ಶಿವರಾಮೇಗೌಡ ಅವರ ವಿರುದ್ಧವಾದ ಅಲೆ ಕ್ಷೇತ್ರದಾದ್ಯಂತ ಇದ್ದು ಕಾಂಗ್ರೆಸ್ಸಿನವರು ಕೂಡ ಬಿಜೆಪಿ ಅಭ್ಯರ್ಥಿಗೆ ಮತ ನೀಡಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್ಗೌಡ ಗೆದ್ದು ಆರು ತಿಂಗಳಾದರೂ ಕ್ಷೇತ್ರದ ಅಭಿವೃದ್ಧಿಗೆ ಅವರ ಕೊಡುಗೆ ಶೂನ್ಯ. ರಾಜ್ಯದಲ್ಲಿ ನಿರೀಕ್ಷಿತ ಅಭಿವೃದ್ಧಿಯಾಗಿಲ್ಲ. ಸರ್ಕಾರದ ಮೇಲೆ ಜನತೆಗೆ ನಂಬಿಕೆಯಿಲ್ಲ. ಹಾಗಾಗಿ ಈ ಬಾರಿ ಮಂಡ್ಯದಲ್ಲಿ ನಮ್ಮ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದರು.
ನಿತ್ಯ ಜೆಡಿಎಸ್-ಕಾಂಗ್ರೆಸ್ ನಾಯಕರು ಪರಸ್ಪರ ತೆಗಳುತ್ತಿದ್ದಾರೆ. ಸಿದ್ದರಾಮಯ್ಯನವರು ಚಾಮುಂಡೇಶ್ವರಿಯಲ್ಲಿ ನನ್ನನ್ನು ಸೋಲಿಸಿದ್ದು ಶನಿಗಳು ಎಂದಿದ್ದಾರೆ. ಅಂದರೆ ಅಲ್ಲಿ ಆಯ್ಕೆಯಾದ ಜೆಡಿಎಸ್ ಶಾಸಕರನ್ನು ಬೈಯ್ದಿದ್ದಾರೆ. ನಾಯಕರು ಒಂದಾದರೂ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಒಂದಾಗಲು ಸಾಧ್ಯವಿಲ್ಲ ಎಂದರು…..