Breaking News

ಜ್ಯೋತಿ ಉದಯ್ ಮೇಲೆ ಎಟಿಎಂನಲ್ಲಿ ಹಲ್ಲೆ ಪ್ರಕರಣ ಸತ್ಯ..!

ಆರೋಪಿ ಮಧುಕರ್ ರೆಡ್ಡಿ ತಪ್ಪೊಪ್ಪಿಗೆ.......

SHARE......LIKE......COMMENT......

ಬೆಂಗಳೂರು:

ಕಾರ್ಪೋರೇಷನ್ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಎಂಬವರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣದ ಆರೋಪಿ ಮಧುಕರ್ ರೆಡ್ಡಿಯನ್ನು ಎಸ್.ಜೆ.ಪಾರ್ಕ್ ಪೊಲೀಸರು ಕೋರ್ಟ್ ಗೆ ಹಾಜರಿಪಡಿಸಿದ್ದಾರೆ.ನ್ಯಾಯಾಧೀಶರ ಮುಂದೆ ಆರೋಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಜ್ಯೋತಿ ಉದಯ್ ಮೇಲೆ ಹಲ್ಲೆ ಮಾಡಿರುವುದು ಸತ್ಯ ನನ್ನ ಪರವಾಗಿ ಯಾವುದೇ ವಕೀಲರು ಬೇಡ. ನನಗೆ ಹೆಂಡತಿ ಮಕ್ಕಳು ಇದ್ದಾರೆ. ನಾನು ವಾಪಸ್ ಹೋಗಬೇಕು. ದಯವಿಟ್ಟು ಇಂದೇ ನನಗೆ ಶಿಕ್ಷೆ ನೀಡಿ ಎಂದು 65ನೇ ಸೆಷನ್ಸ್ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡ.

ಮಧುಕರ್ ರೆಡ್ಡಿ ಮನವಿಗೆ ಪ್ರತಿಕ್ರಿಯೆ ನೀಡಿದ ನ್ಯಾಯಾಧೀಶರು, ನಿಮ್ಮ ಮೇಲಿರುವ ಆರೋಪಕ್ಕೆ ಜೀವಾವಧಿ ಶಿಕ್ಷೆ ಇದೆ. ತಪ್ಪೊಪ್ಪಿಗೆ ಹೇಳಿಕೆ ನೀಡಿದರೂ ಶಿಕ್ಷೆ ಕಡಿಮೆ ಆಗುತ್ತೆ ಅನ್ನೋದು ಗೊತ್ತಿಲ್ಲ. ನಿಮಗೆ ವಕೀಲರನ್ನು ನೇಮಕ ಮಾಡಲಾಗಿದೆ. ಅವರ ಜೊತೆಗೆ ಚರ್ಚಿಸಿ ತಿಳಿಸಿ ಎಂದು ಸೂಚನೆ ನೀಡಿದರು……