ಸಿನಿಮಾ:
ಯುವರಾಜ ನಿಖಿಲ್ ಕುಮಾರ್ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ ನಟನೆಯ ಸೀತಾರಾಮ ಕಲ್ಯಾಣ ಸಿನಿಮಾಗೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಹೀಗಾಗಿ ಜನವರಿ 25 ರಂದು ಸಿನಿಮಾ ರಿಲೀಸ್ ಆಗಲಿದೆ, ಕರ್ನಾಟಕದ 300 ಚಿತ್ರಮಂದಿರ ಸೇರಿದಂತೆ ಒಟ್ಟು 400 ಥಿಯೇಟರ್ ಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ, ಭಾರತದ ವಿವಿಧ ಭಾಗಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ.
ಜನವರಿ 19 ರಂದು ಮೈಸೂರಿನಲ್ಲಿ ಅದ್ದೂರಿ ಸಮಾರಂಭ ಆಯೋಜಿಸಿದ್ದು, ಸಿನಿಮಾದ ಟ್ರೇಲರ್ ಲಾಂಚ್ ಮಾಡಲಾಗುತ್ತದೆ ಅಂದಾಜು ಸುಮಾರು 3 ಲಕ್ಷ ಮಂದಿ ಕಾರ್ಯಕ್ರಮಕ್ಕೆ ಭಾಗವಹಿಸುವ ಸಾಧ್ಯತೆಯಿದೆ….