ಬೆಂಗಳೂರು:
ಪ್ರತ್ಯೇತ ಲಿಂಗಾಯತ ಸ್ವತಂತ್ರ ಧರ್ಮದ ವಿಚಾರಕ್ಕೆ ನಾವು ಕೈ ಹಾಕಬಾರದಿತ್ತು ಎಂಬ ಡಿ.ಕೆ ಶಿ ಅವರ ಹೇಳಿಕೆ ಬಗ್ಗೆ ಟೀಕೆ,ಸರಿಯಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಡಿ.ಕೆ.ಶಿ ತಮ್ಮ ಸ್ವಂತ ಅಭಿಪ್ರಾಯ ಹೇಳಿದ್ದಾರೆ. ಈ ಹೇಳಿಕೆ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ, ಈ ಹೇಳಿಕೆಯನ್ನು ಎಲ್ಲರೂ ಸ್ವಾಗತಿಸಬೇಕು. ಅವರ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಅವರ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ಇದರಲ್ಲಿ ನನಗೆ ಯಾವುದೇ ರಾಜಕಾರಣ ಕಾಣುತ್ತಿಲ್ಲ ಎಂದು ಡಿಕೆಶಿ ಪರ ಯಡಿಯೂರಪ್ಪ ಬ್ಯಾಟಿಂಗ್ ಮಾಡಿದ್ದಾರೆ.
ಯಡಿಯೂರಪ್ಪ ಅವರು ಸಚಿವ ಡಿ.ಕೆ ಶಿವಕುಮಾರ್ ಅವರ ವಿಚಾರದಲ್ಲಿ ಯಾವುದೇ ಟೀಕೆಗೆ ಮಾಡದೆ, ಮೃಧು ಧೋರಣೆ ಅನುಸರಿಸಿದ್ದು, ಇದರ ಹಿಂದೆ ರಾಜಕೀಯ ಕಾರಣಗಳೂ ಇವೆ ಎನ್ನಲಾಗಿದೆ. ಡಿ.ಕೆ ಶಿವಕುಮಾರ್ ಪರ ಯಡಿಯೂರಪ್ಪ ಅವರ ಈ ಮೃಧುತ್ವದ ಧೋರಣೆ ಹಲವು ಕುತೂಹಲಗಳಿಗೆ ಎಡೆ ಮಾಡಿದೆ……