ಹಾಸನ:
ಪ್ರಧಾನಿ ನರೇಂದ್ರ ಮೋದಿಯವರಿಗೆ ನವೆಂಬರ್ 4 ರಿಂದ ಗಂಡಾಂತರ ಇದೆ. ಈ ಅವಧಿಯಲ್ಲಿ ಅಪಮೃತ್ಯು ಗಂಡಾಂತರದಿಂದ ಪಾರಾದರೆ ಇನ್ನೂ ಎರಡು ಮುಕ್ಕಾಲು ವರ್ಷ ಪ್ರಧಾನಿಯಾಗಿರುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ಹೇಳಿದ್ದಾರೆ. ರಾಜ್ಯದಲ್ಲಿ ಈ ಹಿಂದೆ ಇದ್ದವರು ಮತ್ತೆ ಯಾರೂ ಸಿಎಂ ಆಗಲ್ಲ. ಮತ್ತೆ ಹೊಸ ಸರ್ಕಾರ ಬಂದರೆ ಹೊಸಬರೇ ಮುಖ್ಯಮಂತ್ರಿ ಆಗುತ್ತಾರೆ. ಯಾವುದೇ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ ಎಂದ ಗುರೂಜಿ ಮುಂದೆ ಇನ್ನೂ ಪ್ರಕೃತಿ ವಿಕೋಪಗಳು ಆಗಲಿವೆ ಎಂದರು. ಮುಖ್ಯಮಂತ್ರಿ ಯಡಿಯೂರಪ್ಪಗೆ ಪೂರ್ಣ ಅವಕಾಶ ಇಲ್ಲವೇ ಇಲ್ಲ.ಕೋಟಿ ಕೋಟಿ ಹಣ ಮಾಡಿದವರು ಕೃಷ್ಣ ಜನ್ಮಸ್ಥಳಕ್ಕೆ ಸೇರಲೇ ಬೇಕು. ಮುಂದಿನ ಹತ್ತು ವರ್ಷದಲ್ಲಿ ಒಮ್ಮೆ ಐದು ವರ್ಷ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದು ಗುರೂಜಿ ಹೇಳಿದರು.