ಬೆಂಗಳೂರು:
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಸೋಮವಾರ ಮಧ್ಯರಾತ್ರಿ ಬೆಂಗಳೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಕ್ಕೂ ಮೊದಲು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಲ್ಲಿ ಏರುಪೇರು ಕಾಣಿಸಿಕೊಂಡಿರುವುದರಿಂದ ನವೆಂಬರ್ 1 ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಅನಾರೋಗ್ಯದಿಂದ ಸೋಮವಾರ ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಕಡ್ಡಾಯ ವಿಶ್ರಾಂತಿ ಅಗತ್ಯ ಎಂದು ವೈದ್ಯರು ಸಲಹೆ ಮಾಡಿರುವುದರಿಂದ ಕನಿಷ್ಟ ಮೂರು ದಿನಗಳ ಕಾಲವಾದರೂ ಯಾರೂ ಅವರ ಭೇಟಿಗೆ ಬರಬಾರದು ಎಂದು ಶಿವಕುಮಾರ್ ಅವರ ಕುಟುಂಬ ಸದಸ್ಯರು ಮನವಿ ಮಾಡಿದ್ದಾರೆ……