Breaking News

ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ ವಿಧಿವಶ..!

ಹೃದಯಾಘಾತದಿಂದ ನಸುಕಿನ ಜಾವ ಲಿಂಗೈಕ್ಯ...

SHARE......LIKE......COMMENT......

ಗದಗ:

ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ ಶನಿವಾರ ಬೆಳಗಿನ ಜಾವ ಲಿಂಗೈಕ್ಯರಾಗಿದ್ದಾರೆ ಶನಿವಾರ ನಸುಕಿನ ಜಾವ ವಿಧಿವಶರಾದರು. ಹೃದಯಾಘಾತಕ್ಕೊಳಗಾಗಿದ್ದ ಅವರನ್ನು ನಗರದ ಚಿರಾಯು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಜಾವ ವಿಧಿವಶರಾಗಿದ್ದಾರೆ.

ಸ್ವಾಮೀಜಿಯವರ ವಿಯೋಗ ಅಸಂಖ್ಯಾತ ಭಕ್ತ ಸಮೂಹಕ್ಕೆ ಆಘಾತವನ್ನುಂಟು ಮಾಡಿದೆ. ಸಿದ್ದಲಿಂಗ ಸ್ವಾಮೀಜಿ ಅವರದ್ದು ಸಹಜ ಸಾವು ಎಂದು ತೋಂಟದಾರ್ಯ ಶಾಖಾ ಮಠದ ನಿಜಗುಣಾನಂದ ಶ್ರೀಗಳು ತಿಳಿಸಿದ್ದಾರೆ. ಭಾನುವಾರ ಮಠದ ಆವರಣದಲ್ಲಿ ಶ್ರೀಗಳ ಅಂತ್ಯಸಂಸ್ಕಾರ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ…..