Breaking News

ದೆಹಲಿ ಹೈಕೋರ್ಟ್​ನಲ್ಲಿ ಇಂದು ಡಿಕೆಶಿ ಜಾಮೀನು ಅರ್ಜಿ ವಿಚಾರಣೆ..!

ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಜೈಲು....

SHARE......LIKE......COMMENT......

ದೆಹಲಿ: ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಜೈಲು ಸೇರಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ದೆಹಲಿ ಹೈಕೋರ್ಟ್​ ನಡೆಸಲಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಅವರ ಜಾಮೀನು ಅರ್ಜಿಯನ್ನು ಇಡಿ ವಿಶೇಷ ಕೋರ್ಟ್​ ತಿರಸ್ಕರಿಸಿದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್​ ಮೊರೆ ಹೋಗಿದ್ದಾರೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಅವರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಸುಳಿವು ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ಜೈಲಿನಲ್ಲಿಟ್ಟಿದ್ದಾರೆ……