Breaking News

ದೇಶಾದ್ಯಂತ ನವೆಂಬರ್​ 5ರಿಂದ 10 ದಿನಗಳ ಕಾಲ ಕಾಂಗ್ರೆಸ್​ ಪ್ರತಿಭಟನೆ..!

ಜನ ವಿರೋಧಿ ಆರ್ಥಿಕ ನೀತಿಗಳನ್ನು ಖಂಡಿಸಿ ಪ್ರತಿಭಟನೆ....

SHARE......LIKE......COMMENT......

ನವದೆಹಲಿ:

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರದವರ ಜನ ವಿರೋಧಿ ಆರ್ಥಿಕ ನೀತಿಗಳನ್ನು ಖಂಡಿಸಿ ಕಾಂಗ್ರೆಸ್ ನವೆಂಬರ್ 5ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಹೇಳಿದ್ದಾರೆ.ದೇಶದಲ್ಲಿ ಆರ್ಥಿಕ ಕುಸಿತ, ನಿರುದ್ಯೋಗ ಸಮಸ್ಯೆ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಬ್ಯಾಂಕಿಂಗ್ ವ್ಯವಸ್ಥೆ ಕುಸಿತ ಹಾಗೂ ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರತಿ ಪಕ್ಷ ಕಾಂಗ್ರೆಸ್​ನವರು​ ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟಿಸಲು ನಿರ್ಧರಿಸಿದೆ. ನವೆಂಬರ್ 5 ರಿಂದ ನವೆಂಬರ್ 15ರ ವರೆಗೆ ಒಟ್ಟು 10 ದಿನಗಳ ಕಾಲ ಎಲ್ಲಾ ರಾಜ್ಯಗಳ ರಾಜಧಾನಿ ಹಾಗೂ ಜಿಲ್ಲಾ ಮಟ್ಟದಲ್ಲೂ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದ ಅವರು,  ಸೆಪ್ಟೆಂಬರ್ 12 ಮತ್ತು 13ರಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ……