ನವದೆಹಲಿ:
ಮೈತ್ರಿ ಸರ್ಕಾರದ ಲೋಕಸಭಾ ಟಿಕೆಟ್ ಫೈಟ್ ಕೊನೆಗೂ ಕೊನೆಗೊಂಡಿದೆ, 28 ಕ್ಷೇತ್ರಗಳ ಪೈಕಿ ಜೆಡಿಎಸ್ ಗೆ 8 ಕ್ಷೇತ್ರ ಹಾಗೂ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಸ್ಫರ್ದಿಸಲು ಒಮ್ಮತ ವ್ಯಕ್ತವಾಗಿದೆ…
ಶಿವಮೊಗ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ಉತ್ತರ ಹಾಗೂ ವಿಜಯಪುರ, ಚಿಕ್ಕಮಗಳೂರು, ಉತ್ತರ ಕನ್ನಡ ಸೇರಿ 8 ಕ್ಷೇತ್ರಗಳನ್ನು ಪಡೆದುಕೊಳ್ಳುವಲ್ಲಿ ಜೆಡಿಎಸ್ ಯಶಸ್ವಿಯಾಗಿದೆ ಎಂದು ಪಟ್ಟಿ ಬಿಡುಗಡೆಯಾಗಿದೆ.ಆರಂಭದಿಂದಲೂ 12 ಕ್ಷೇತ್ರಗಳಿಗೆ ಸ್ಪರ್ಧಿಸುವುದಾಗಿ ಹೇಳುತ್ತಾ ಬಂದಿದ್ದ ಜೆಡಿಎಸ್ ನಂತರ 10 ಸ್ಥಾನಗಳನ್ನು ಬಿಟ್ಟುಕೊಡುವಂತೆ ಕಾಂಗ್ರೆಸ್ ಮೇಲೆ ಒತ್ತಡ ಹೇರಿತ್ತು. ಅದರಲ್ಲೂ ಮೈಸೂರು, ಚಿಕ್ಕಬಳ್ಳಾಪುರ, ಮಂಡ್ಯ ಜಿಲ್ಲೆಗಳಿಗೆ ಪಟ್ಟು ಹಿಡಿದಿತ್ತು. ಈ ವಿಚಾರದಲ್ಲಿ ಉಭಯ ಪಕ್ಷಗಳಲ್ಲಿ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ಸುತ್ತಿನ ಸಭೆ ನಡೆಸಲಾಗಿತ್ತು
ಇದರ ನಡುವೆ ಸಿದ್ದರಾಮಯ್ಯ ಮೈಸೂರು ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ತುಮಕೂರು ಕೈ ಪಡೆಯಿಂದ ಜಾರಿದ್ದು, ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ…..