ಧಾರವಾಡ:
ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ. ರಾತ್ರಿಯಿಡೀ ಎನ್.ಡಿ.ಆರ್.ಎಫ್. ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿದ್ರು . ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಕಟ್ಟಡದ ಅವಶೇಷಗಳಡಿ ಸಿಲುಕಿದ 55ಕ್ಕೂ ಹೆಚ್ಚು ಜನರನ್ನು ಇದುವರೆಗೂ ರಕ್ಷಿಸಲಾಗಿದೆ. ಕಟ್ಟಡ ಕುಸಿದು ಗಾಯಗೊಂಡವರನ್ನು ವಿವಿಧ ಆಸ್ಪತ್ರೆಗೆ ಸೇರಿಸಲಾಗಿದೆ. ಕಟ್ಟಡಗಳ ಅವಶೇಷಗಳಡಿ ಇನ್ನೂ ಹಲವರು ಸಿಲುಕಿದ್ದು ಅವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಲಾಗಿದೆ.
ಘಟನಾ ಸ್ಥಳದಲ್ಲಿ ಬೀಡು ಬಿಟ್ಟಿರೋ ಡಿಸಿ ಹಾಗೂ ಪೊಲೀಸ್ ಆಯುಕ್ತರು ಜಿಲ್ಲಾಧಿಕಾರಿ ದೀಪಾ ಚೋಳನ್, ಪೊಲೀಸ್ ಆಯುಕ್ತ M.N.ನಾಗರಾಜು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಇನ್ನು ಕಟ್ಟಡ ದುರಂತಕ್ಕೆ ಸಂಬಂಧಿಸಿದಂತೆ ಶ್ರೀ ರೇಣುಕಾದೇವಿ ಕನ್ಸ್ಟ್ರಕ್ಷನ್ ಕಟ್ಟಡದ ಜಂಟಿ ಮಾಲೀಕರ ಮೇಲೆ FIR ದಾಖಲಾಗಿದೆ. ಕಳಪೆ ಕಾಮಗಾರಿ ಆರೋಪದಡಿ ಮಾಲೀಕರಾದ ರವಿ ಸಬರದ, ಬಸವರಾಜ ನಿಗದಿ, ಮಹಾಬಳೇಶ್ವರ ಪುರದಗುಡಿ, ರಾಜು ಘಾಟೀನ, ಗಂಗಣ್ಣ ಶಿಂತ್ರೆ, ಕಟ್ಟಡದ ವಿನ್ಯಾಸಕಾರ ವಿವೇಕ ಪವಾರ ಸೇರಿ 7 ಮಂದಿ ಮೇಲೆ FIR ದಾಖಲಿಸಿದ್ದು, ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ……