Breaking News

ನಡೆದಾಡುವ ದೇವರು ಇನ್ನಿಲ್ಲ….

ಪರಮಪೂಜ್ಯ ಶ್ರೀಗಳು ವಿಧಿವಶ.....

SHARE......LIKE......COMMENT......

ತುಮಕೂರು:

ದೇವರಲೋಕಕ್ಕೆ ನಡೆದಾಡುವ ದೇವರು….ಪರಮಪೂಜ್ಯ ಡಾ.ಶಿವಕುಮಾರ ಸ್ವಾಮೀಜಿ ಲಿಂಗೈಕ್ಯ, ಶ್ರೀ ಸಿದ್ದಗಂಗಾ ಶ್ರೀಗಳು ನಮ್ಮೆಲ್ಲರನ್ನ ದೈಹಿಕವಾಗಿ ಅಗಲಿದ್ದಾರೆ, ಅವರ ಅತ್ಮ ಅಜರಾಮರವಾಗಿ ಉಳಿಯಲಿ….

ಪರಮಪೂಜ್ಯರಾದ ಡಾ.ಶಿವಕುಮಾರ ಸ್ವಾಮೀಜಿಯವರು ಜಗತ್ತು ಕಂಡ ಒಂದು ಅಚ್ಚರಿ. ತಮ್ಮ ವೈಯುಕ್ತಿಕ ಜೀವನವನ್ನು ತ್ಯಾಗ ಮಾಡಿ ಸುಮಾರು 80 ವರ್ಷಗಳ ಕಾಲ ನಿರಂತರವಾಗಿ ಅವಕಾಶವಂಚಿತ ಮಕ್ಕಳಿಗೆ ಜಾತಿ, ಮತ, ಅಂತಸ್ತುಗಳನ್ನೆಣಿಸದೇ ಅನ್ನ ದಾಸೋಹದ ಜೊತೆಗೆ ಅಕ್ಷರವನ್ನು ಕಲಿಸಿ ಅವರ ಬಾಳು ಉತ್ತಮ ಮಾರ್ಗದಲ್ಲಿ ಸಾಗಲು ಅಡಿಗಲ್ಲು ಹಾಕಿಕೊಟ್ಟ ಸಿದ್ದಗಂಗೆಯ ಸಿದ್ದಿಪುರುಷರು ಪೂಜ್ಯ ಸ್ವಾಮೀಜಿಯವರು.

01.04.1907ರಲ್ಲಿ ಜನಿಸಿದ ಡಾ.ಶಿವಕುಮಾರ ಸ್ವಾಮೀಜಿ ಅವರು, ವಿರಕ್ತಾಶ್ರಮ ದೀಕ್ಷೆ ಪಡೆದು 1930ರಲ್ಲಿ ಸಿದ್ಧಗಂಗಾ ಕ್ಷೇತ್ರ ಪ್ರವೇಶಿಸಿದರು. ಅಂದಿನಿಂದ ಸಿದ್ಧಗಂಗಾ ಮಠಕ್ಕೆ ಹೊಸ ಬೆಳಕು ಮೂಡಿಬಂತು. ಜಂಗಮ ಮೂರ್ತಿಗಳಾದ ಶಿವಕುಮಾರ ಮಹಾಸ್ವಾಮಿಗಳು ಉದ್ಧಾನ ಶಿವಯೋಗಿಗಳ ಅಣತಿಯಂತೆ 1941ರಲ್ಲಿ ಸಿದ್ಧಗಂಗಾ ಮಠದ ಉತ್ತರಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡರು. ನಂತರ ಸಿದ್ಧಗಂಗಾ ಕ್ಷೇತ್ರದ ಸ್ವರೂಪ ಆಮೂಲಾಗ್ರವಾಗಿ ಬದಲಾವಣೆಯಾಯಿತು……..