ಬೆಂಗಳೂರು:
ನಾಳೆ, ನಾಡಿದ್ದು ಭಾರತ್ ಬಂದ್ ಬಿಸಿ ತಟ್ಟಲಿದೆ. ವಿವಿಧ ಕಾರ್ಮಿಕ ಸಂಘಟನೆಗಳ ಒಕ್ಕೂಟ ಬಂದ್ಗೆ ಕರೆ ನೀಡಿವೆ. ಮೋಟಾರು ವಾಹನ ಕಾಯ್ದೆ ತಿದ್ದುಪಡಿಗೆ ವಿರೋಧ, ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆ ಜಾರಿ ಸೇರಿದಂತೆ 12 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಂದ್ಗೆ ಕರೆ ನೀಡಲಾಗಿದೆ. ಎಐಟಿಯುಸಿ, ಸಿಐಟಿಯು, ಐಎನ್‍ಟಿಯುಸಿ, ಎಲ್‍ಪಿಎಫ್ ಕಾರ್ಮಿಕ ಸಂಘಟನೆಗಳು ಈ ಬಂದ್ಗೆ ಕರೆ ನೀಡಿವೆ.
ಬಂದ್ಗೆ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳು ಬಂದ್ಗೆ ಬೆಂಬಲ ಸೂಚಿಸಿದೆ.ಆಟೋ, ಓಲಾ ಮತ್ತು ಉಬರ್ ಕ್ಯಾಬ್ ಬ್ಯಾಂಕ್ ನೌಕರರೂ ಸಾಥ್ ನೀಡ್ತಿದ್ದು, ಬ್ಯಾಂಕ್ ಸೇವೆಯಲ್ಲೂ ವ್ಯತ್ಯಯವಾಗುವ ಸಾಧ್ಯತೆಯಿದೆ. ಶಾಲೆ-ಕಾಲೇಜುಗಳಿಗೆ ಆಯಾ ಜಿಲ್ಲೆಗಳ ಪರಿಸ್ಥಿತಿ ನೋಡಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ….