ಬೆಂಗಳೂರು:
ಕಾರ್ಮಿಕ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಭಾರತ್ ಬಂದ್‌ಗೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗ ಎಲ್ಲರ ಮುಂದಿರುವ ಪ್ರಶ್ನೆ ಬುಧವಾರವೂ ಬಂದ್ ಮುಂದುವರಿಯುತ್ತದಾ ಇಲ್ಲವಾ ಎಂಬುದಾಗಿದೆ. ಮೊದಲ ದಿನದ ಪ್ರತಿಕ್ರಿಯೆಯನ್ನು ಗಮನಿಸಿದರೆ ಬುಧವಾರ ಪ್ರತಿಭಟನೆ ಕೂಡ ನಡೆಯುವ ಸಾಧ್ಯತೆ ಇಲ್ಲ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಘೋಷಿಸಲಾಗಿದೆ. ಬಹುತೇಕ ಎಲ್ಲ ಸೇವೆಗಳು ಲಭ್ಯವಿರಲಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿವೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಟ್ಯಾಕ್ಸಿ, ಓಲಾ, ಉಬರ್ ಸೇವೆ ಲಭ್ಯವಿರಲಿದೆ ಎಂದು ಚಾಲಕರು, ಮಾಲೀಕರ ಸಂಸ್ಥೆ ಮಾಹಿತಿ ನೀಡಿದೆ.
ಮೈಸೂರಿನಲ್ಲಿ ನಾಳೆ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಈ ನಡುವೆ ಕೆಲವು ಕಾರ್ಮಿಕ ಸಂಘಟನೆಗಳು ಈಗಾಗಲೇ ಪ್ರಕಟಣೆ ನೀಡಿದ್ದು, ಮೈಸೂರಿನ ಕೆಲವೊಂದು ಪ್ರಮುಖ ಪ್ರದೇಶಗಳಲ್ಲಿ ಪ್ರತಿಭಟನೆಗಳನ್ನು ಮಾತ್ರ ನಡೆಸಲಾಗುವುದು ಎಂದು ತಿಳಿಸಲಾಗಿದೆ.
ಪೆಟ್ರೋಲ್ ಬಂಕ್, ಮಾಲ್‌ಗಳು ಓಪನ್ ಆಗಿರಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಚಾಮರಾಜನಗರದಲ್ಲಿ ನಾಳೆ ತಾಲೂಕು ಕೇಂದ್ರಗಳಲ್ಲೂ ಮುಷ್ಕರ ನಡೆಯಲಿದೆ. ಬಂದ್ ಇಲ್ಲ. ಶಾಲೆ, ಕಾಲೇಜಿಗೆ ರಜೆ ಇಲ್ಲ.
ಮಂಡ್ಯದಲ್ಲಿಯೂ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ……