ಉಡುಪಿ:
ಮುಂಬೈನಿಂದ ಎರ್ನಾಕುಲಂಗೆ ಸಂಚರಿಸುತ್ತಿದ್ದ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲು ಉಡುಪಿ ಜಿಲ್ಲೆ ಬೈಂದೂರು ರೈಲ್ವೇ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಕಂಬದಕೋಣೆ ಬಳಿ ಚಲಿಸುತ್ತಿದ್ದ ವೇಳೆ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಳೆದ ರಾತ್ರಿ 1.30ರ ಸುಮಾರಿಗೆ ರೈಲಿನ ಎಸಿ ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕುಂದಾಪುರ ನಿಲ್ದಾಣದಲ್ಲಿ ರೈಲಿನಿಂದ ಇಳಿದ ಮಹಿಳೆಯೊಬ್ಬರು ಕೂಡಲೇ ಬೆಂಕಿ ಹೊತ್ತಿರುವುದನ್ನ ರೈಲ್ವೆ ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ. ಎಚ್ಚೆತ್ತ ಸಿಬ್ಬಂದಿ ರೈಲನ್ನ ನಿಲ್ಲಿಸಿದ್ದಾರೆ. ಎಸಿ ಬೋಗಿಯಲ್ಲಿ ಶಾಟ್ ಸರ್ಕ್ಯೂಟ್ ನಿಂದ ಈ ಬೆಂಕಿ ಅವಘಢ ಸಂಭವಿಸಿದೆ ಎನ್ನಲಾಗಿದ್ದು, ಬೆಂಕಿ ಹತ್ತಿದ ಬೋಗಿಯನ್ನು ಪ್ರತ್ಯೇಕಿಸಿ, ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಲಾಗಿದೆ……