ಚಿಕ್ಕಬಳ್ಳಾಪುರ:
ಜಿಲ್ಲೆಯಲ್ಲಿ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾದ್ಯಂತ ನ.1ರಿಂದ ದ್ವಿಚಕ್ರ ವಾಹನ ಚಾಲಕರಿಗೆ ಹಾಗೂ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪ್ರಕಟಿಸಿದರು. ನಗರದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತೆ ಸಮಿತಿ ಸಭೆಯಲ್ಲಿ ಮಾತನಾಡಿದರು.
ದ್ವಿಚಕ್ರ ವಾಹನ ಸವಾರರು ಹಾಗೂ ಹಿಂಬದಿ ಸವಾರರು ಸಹ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಈ ಬಗ್ಗೆ ಜಿಲ್ಲಾದ್ಯಂತ ಹೆಲ್ಮೆಟ್ ಕಡ್ಡಾಯವನ್ನು ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿಗಳು ರಸ್ತೆ ಸುರಕ್ಷತೆ ಸಮಿತಿ ಸಭೆಯಲ್ಲಿದ್ದ ಪೊಲೀಸ್ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು……