ಮುಂಬೈ:
17 ವರ್ಷದ ಅಪ್ರಾಪ್ತ ಬಾಲಕನನ್ನು ಮದುವೆಯಾಗಿ ಆತನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ 22 ವರ್ಷದ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.ಬಾಲಕನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮುಂಬೈನ ಬುದ್ಧ ಕಾಲೋನಿಯ ಮಹಿಳೆಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಪ್ರಾಪ್ತ ಬಾಲಕನ ತಾಯಿ ಹಾಗೂ ಮಹಿಳೆ ಒಂದೇ ಪ್ರದೇಶದ ನಿವಾಸಿಗಳಾಗಿದ್ದು, ಎರಡು ವರ್ಷಗಳ ಹಿಂದೆ ತನ್ನ ಮಗನ ತಲೆ ಕೆಡಿಸಿ ಆತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಬಾಲಕನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.ಈ ಮಹಿಳೆಗೆ ಈಗಾಗಲೇ ಎರಡು ಬಾರಿ ಮದುವೆಯಾಗಿದ್ದು, ವಿಚ್ಛೇದನ ಪಡೆದಿದ್ದಾಳೆ ಎಂದು ಬಾಲಕನ ತಾಯಿ ಆರೋಪಿಸಿದ್ದಾರೆ.
ವಯಸ್ಸಿನಲ್ಲಿ ತನಗಿಂತ 5 ವರ್ಷ ಚಿಕ್ಕವನಿದ್ದ ತನ್ನ ಗಂಡನ ಮೇಲೆ ಪದೇ ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ……