ಯಳಂದೂರು:
ತಾಲೂಕಿನ ಕಂದಹಳ್ಳಿಯ ಉಪ್ಪಾರ ಬಡಾವಣೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಹತ್ಯೆಗೈದು ಪರಾರಿಯಾಗಿದ್ದಾನೆ. ಭಾಗ್ಯ (26) ಹತ್ಯೆಗೀಡಾದ ಮಹಿಳೆ. ಈಕೆಯನ್ನು ಹತ್ಯೆಗೈದ ಪತಿ ಶೇಖರ್ ತಲೆ ಮರೆಸಿಕೊಂಡಿದ್ದಾನೆ.
ಕುಡಿತದ ಚಟ ಬೆಳೆಸಿಕೊಂಡಿದ್ದ ಈತ ನಿತ್ಯವೂ ಕುಡಿದು ಬಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಅದರಂತೆ ಶನಿವಾರ ಮಧ್ಯರಾತ್ರಿ ಸಹ ಜಗಳ ನಡೆದಿದ್ದು, ಇದು ವಿಕೋಪಕ್ಕೆ ತಿರುಗಿದೆ. ಈ ವೇಳೆ ಆರೋಪಿ ಶೇಖರ್ ಮನೆಯಲ್ಲಿದ್ದ ಕುಡಗೋಲಿನಿಂದ ಭಾಗ್ಯ ಅವರ ಕತ್ತನ್ನು ಸೀಳಿ ಪರಾರಿಯಾಗಿದ್ದಾನೆ. ಭಾನುವಾರ ಬೆಳಗ್ಗೆ ಅಕ್ಕ ಪಕ್ಕದ ಮನೆಯವರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಪಟ್ಟಣ ಪೊಲೀಸರು ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡದೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ……