ಬೆಂಗಳೂರು:
ವಿಧಾನಸೌಧದಲ್ಲಿ ಸಚಿವ ಪುಟ್ಟರಂಗಶೆಟ್ಟಿ ಕಚೇರಿ ಸಿಬ್ಬಂದಿ ಮೋಹನ್ ಬಳಿ ದಾಖಲೆ ಇಲ್ಲದ 25.76 ಲಕ್ಷ ಪತ್ತೆ ಪ್ರಕರಣವನ್ನ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ.
ಸಚಿವ ಪುಟ್ಟರಂಗ ಶೆಟ್ಟಿ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸ್ತಿದೆ. ಹುಬ್ಬಳ್ಳಿ, ಕಲಬುರ್ಗಿ,ರಾಮನಗರ, ಹಾಸನ, ಬಳ್ಳಾರಿ ಸೇರಿ ಹಲವೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸ್ತಿದ್ದಾರೆ. ಕೂಡಲೇ ಸಚಿವ ಪುಟ್ಟರಂಗ ಶೆಟ್ಟಿ ರಾಜೀನಾಮೆ ನೀಡಬೇಕು. ಇಲ್ಲವಾದ್ರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸೋದಾಗಿ ಬಿಜೆಪಿ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ…..