Breaking News

ಪೆಟ್ರೋಲ್,ಡೀಸೆಲ್ ದರ 5ನೇ ದಿನವೂ ಇಳಿಮುಖ..!

ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಗ್ರಾಹಕರಿಗೆ ಕೊಂಚ ನಿರಾಳ ....

SHARE......LIKE......COMMENT......

ನವದೆಹಲಿ:

ತೈಲ ಬೆಲೆ ಏರಿಕೆ ಹಾಗೂ ವ್ಯಾಟ್ ದರ ಇಳಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬಂಕ್ ಹಾಗೂ ಸಾಂದ್ರೀಕಕೃತ ನೈಸರ್ಗಿದ ಅನಿಲದ (ಸಿಎನ್’ಜಿ) ಸಂಸ್ಥೆಗಳು ಪ್ರತಿಭಟನೆ ನಡೆಸುತ್ತಿದ್ದು, ಈ ನಡುವಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ದರ ಸತತ 5ನೇ ದಿನವೂ ಇಳಿಮುಖವಾಗಿದೆ.ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿರುವ ಹಿನ್ನಲೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಇಳಿಕೆಗೊಂಡಿದೆ. ಇದರಿಂದಾಗಿ ಕಳೆದ 2 ತಿಂಗಳಿನಿಂದ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಗ್ರಾಹಕರಿಗೆ ಕೊಂಚ ನಿರಾಳ ಎದುರಾಗಿದೆ.

ದೇಶದ ಸರ್ಕಾರಿ ಸ್ವಾಮ್ಯದ ಕಂಪನಿಗಳು ಪ್ರತೀ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕ್ರಮವಾಗಿ 30 ಪೈಸೆ ಮತ್ತು 27 ಪೈಸೆ ಇಳಿಸಿದೆ.ಇದರಿಂದಾಗಿ ರಾಜಧಾನಿ ದೆಹಲಿಯಲ್ಲಿ ಇಂದಿನ ಪ್ರತೀ ಲೀಟರ್ ಪೆಟ್ರೋಲ್ ಬೆಲೆ ರೂ.81.34 ಹಾಗೂ ಡೀಸೆಲ್ ಪ್ರತೀ ಲೀಟರ್ ಬೆಲೆ ರೂ.74.32 ಆಗಿದೆ.ಇನ್ನು ವಾಣಿಜ್ಯ ನಗರಿ ಮುಂಬೈ ನಲ್ಲಿ ಪೆಟ್ರೋಲ್ ಬೆಲೆಯಲ್ಲಿ 30 ಪೈಸೆ ಹಾಗೂ ಡೀಸೆಲ್ ಬೆಲೆಯಲ್ಲಿ 28 ಪೈಸೆ ಕಡಿತಗೊಂಡಿದ್ದು, ಇಂದಿನ ಪ್ರತೀ ಲೀಟರ್ ಪೆಟ್ರೋಲ್ ಬೆಲೆ ರೂ.86.91 ಹಾಗೂ ಪ್ರತೀ ಲೀಟರ್ ಡೀಸೆಲ್ ಬೆಲೆ 78.54 ಇದೆ.

ತೈಲದ ಮೇಲೆ ವಿಧಿಸುವ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಕಡಿತಗೊಳಿಸಲು ನಿರಾಕರಿಸಿದ ರಾಜಧಾನಿ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಸರ್ಕಾರದ ವಿರುದ್ಧ ಪೆಟ್ರೋಲ್ ಬಂಕ್ ಗಳೂ ಹಾಗೂ ಸಾಂದ್ರೀಕೃತ ನೈಸರ್ಗಿಕ ಅನಿಲದ (ಸಿಎನ್’ಜಿ) ಸಂಸ್ಥೆಗಳು ಇಂದೂ ಕೂಡ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿವೆ.ದೆಹಲಿ ಸರ್ಕಾರ ತೈಲ ಮೇಲಿನ ವ್ಯಾಟ್ ದರ ಇಳಿಸುವಂತೆ ನಿರಾಕರಿಸಿದ ಹಿನ್ನಲೆಯಲ್ಲಿ ದೆಹಲಿಯಲ್ಲಿನ 400 ಪೆಟ್ರೋಲ್ ಬಂಕ್ ಗಳು ಇಂದು ಬೆಳಿಗ್ಗೆ 6 ರಿಂದ ಸಂಜೆ 5ಗಂಟೆಯವರೆಗೂ ಪ್ರತಿಭಟನೆ ನಡೆಸಲು ನಿರ್ಧರಿಸಿವೆ……