ಮುಂಬೈ:
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ದರ ಮತ್ತೆ ಇಳಿಕೆಯತ್ತ ಸಾಗಿದ್ದು, ಇದರಿಂದಾಗಿ ದೇಶದಲ್ಲಿ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ.ಪೆಟ್ರೋಲ್ 21 ಪೈಸೆ ಮತ್ತು ಡೀಸೆಲ್ ದರಲ್ಲಿ 18 ಪೈಸೆಯಷ್ಟು ಇಳಿಕೆಯಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 21 ಪೈಸೆ ಯಷ್ಟು ಇಳಿಕೆಯಾಗಿ ಪೆಟ್ರೋಲ್ ದರ ಲೀಟರ್ಗೆ 70.39 ರೂ ಗೆ ಇಳಿಕೆಯಾಗಿದೆ. ಅಂತೆಯೇ ಡೀಸೆಲ್ ದರದಲ್ಲಿ18 ಪೈಸೆಯಷ್ಟು ಇಳಿಕೆಯಾಗಿದ್ದು ಡೀಸೆಲ್ ದರ 64.15 ರೂ.ಗೆ ಇಳಿಕೆಯಾಗಿದೆ……