ಬೆಂಗಳೂರು:
ದಕ್ಷಿಣ ಭಾರತದ ಮೊದಲ ಮಹಿಳಾ ಜಗದ್ಗುರು,ಬಾಗಲಕೋಟೆ ಹುನಗುಂದ ತಾಲೂಕಿನ ಕೂಡಲಸಂಗಮದ ಬಸವಪೀಠದ ಅಧ್ಯಕ್ಷೆ 74 ವರ್ಷದ ಮಾತೆ ಮಹಾದೇವಿ ಅವರು ಗುರುವಾರ ಲಿಂಗೈಕ್ಯರಾಗಿದ್ದಾರೆ
ಕಳೆದ ಎಂಟು ದಿನಗಳಿಂದ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾತೆ ಮಹಾದೇವಿ, ಇಂದು ಸಂಜೆ 4.45ಕ್ಕೆ ಕೊನೆಯುಸಿರೆಳೆದಿದ್ದಾರೆ.ಒಂದು ವರ್ಷದಿಂದ ಮೂತ್ರಪಿಂಡ ವಿಫಲವಾಗಿದ್ದು, ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಆದರೆ ಇತ್ತೀಚಿಗೆ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.ದೀರ್ಘಕಾಲದಿಂದ ಮಧುಮೇಹ, ಗಂಭೀರ ಶ್ವಾಸಕೋಶ ಹಾಗೂ ಮೂತ್ರಪಿಂಡದ ಸಮಸ್ಯೆ ಎದುರಿಸುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಸಂಜೆ ಕೊನೆಯುಸಿರೆಳೆದಿದ್ದಾರೆ.
ಮಾತೆ ಮಹಾದೇವಿ ಅವರ ಪಾರ್ಥಿವ ಶರೀರವನ್ನು ಮಣಿಪಾಲ್ ಆಸ್ಪತ್ರೆಯಿಂದ ಗುರುವಾರ ರಾಜಾಜಿನಗರದ ಬಸವ ಮಂಟಪಕ್ಕೆ ಕೊಂಡೊಯ್ದು ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಅಲ್ಲಿಂದ ಶುಕ್ರವಾರ ಪಾರ್ಥಿವ ಶರೀರವನ್ನು ಕೂಡಲ ಸಂಗಮಕ್ಕೆ ರವಾನಿಸಿ, ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ….