Breaking News

ಬಾಂಗ್ಲಾದಲ್ಲಿ ಶೇಖ್ ಹಸೀನಾಗೆ ಜಯಭೇರಿ..!

ನಾಲ್ಕನೇ ಬಾರಿ ಪ್ರಧಾನಿಯಾಗಿ ಗದ್ದುಗೆ.....

SHARE......LIKE......COMMENT......

ಢಾಕಾ:
ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಶೇಖ್ ಹಸೀನಾಗೆ ಜಯಭೇರಿ..!ನಾಲ್ಕನೇ ಬಾರಿ ಪ್ರಧಾನಿಯಾಗಿ ಗದ್ದುಗೆ ಯೆಸ್ ಪ್ರಧಾನಿ ಶೇಖ್ ಸಹಸೀನಾ ನೇತೃತ್ವದ ಅವಾಮಿ ಲೀಗ್ ಮೈತ್ರಿಕೂಟ ಭರ್ಜರಿ ಜಯಭೇರಿ ಬಾರಿಸಿದೆ…

300 ಸದಸ್ಯ ಬಲದ ಸಂಸತ್ ನಲ್ಲಿ ಆಡಳಿತಾರೂಢಾ ಶೇಖ್ ಹಸೀನಾ ಅವಾಮಿ ಲೀಗ್ ಪಕ್ಷ ಮತ್ತು ಮೈತ್ರಿಕೂಟ 288 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪ್ರಮುಖ ವಿರೋಧ ಪಕ್ಷ ಕೇವಲ ಆರು ಸ್ಥಾನಗಳಲ್ಲಿ ಜಯ ಸಾಧಿಸಿದೆ ಎಂದು ಚುನಾವಣಾ ಆಯೋಗದ ಕಾರ್ಯದರ್ಶಿ ಹೇಲಾಲ್ ಉದ್ದೀನ್ ಅಹ್ಮದ್ ತಿಳಿಸಿದ್ದಾರೆ.2014ರ ಸಾರ್ವತ್ರಿಕ ಚುನಾವಣೆಯನ್ನು ಬಹಿಷ್ಕರಿಸಿದ್ದ ಬಾಂಗ್ಲಾದೇಶ್ ನ್ಯಾಶನಲಿಷ್ಟ್ ಪಾರ್ಟಿ ಧೂಳೀಪಟವಾಗಿದೆ.

ಸಾರ್ವತ್ರಿಕ ಚುನಾವಣೆಯಲ್ಲಿ ನಕಲಿ ಮತದಾನ ನಡೆಸಲಾಗಿದೆ, ಮರು ಚುನಾವಣೆ ನಡೆಸಬೇಕೆಂದು ವಿಪಕ್ಷಗಳು ಆಗ್ರಹಿಸಿ ನಡೆಸಿದ ಹಿಂಸಾಚಾರದಲ್ಲಿ 17 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ……..